Bagepally News: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವೆಂಕಟರೆಡ್ಡಿಗೆ ಸನ್ಮಾನ
ಚಿಕ್ಕಬಳ್ಳಾಪುರ ಜಿಲ್ಲೆಯ ಕನ್ನಡ ಭವನದಲ್ಲಿ ೨೦೨೫-೨೬ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವೆಂಕಟರೆಡ್ಡಿ ಅವರ ಮನೆಯಲ್ಲಿ ಮುಖ್ಯ ಶಿಕ್ಷಕರ ಹಿರಿಯ ಪ್ರಾಥಮಿಕ ಶಾಲೆ ಸಂಘದ ವತಿಯಿಂದ ಸನ್ಮಾನ ಮಾಡಿ ಮಾತನಾಡಿದರು

ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ರಾಷ್ಟಪತಿಯಾಗಿ ಡಾ. ರಾಧಾಕೃಷ್ಣ ಅವರ ಶಿಸ್ತು, ಶ್ರದ್ದೆ ನಮಗೆಲ್ಲ ಮಾದರಿಯಾಗಿದೆ ಎಂದು ಕೊತ್ತಪಲ್ಲಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವೇಣು ಅವರು ಅಭಿಪ್ರಾಯ ಪಟ್ಟರು. -

ಬಾಗೇಪಲ್ಲಿ: ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ರಾಷ್ಟಪತಿಯಾಗಿ ಡಾ. ರಾಧಾಕೃಷ್ಣ ಅವರ ಶಿಸ್ತು, ಶ್ರದ್ದೆ ನಮಗೆಲ್ಲ ಮಾದರಿಯಾಗಿದೆ ಎಂದು ಕೊತ್ತಪಲ್ಲಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ವೇಣು ಅವರು ಅಭಿಪ್ರಾಯ ಪಟ್ಟರು.
ಚಿಕ್ಕಬಳ್ಳಾಪುರ ಜಿಲ್ಲೆಯ ಕನ್ನಡ ಭವನದಲ್ಲಿ ೨೦೨೫-೨೬ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವೆಂಕಟರೆಡ್ಡಿ ಅವರ ಮನೆಯಲ್ಲಿ ಮುಖ್ಯ ಶಿಕ್ಷಕರ ಹಿರಿಯ ಪ್ರಾಥಮಿಕ ಶಾಲೆ ಸಂಘದ ವತಿಯಿಂದ ಸನ್ಮಾನ ಮಾಡಿ ಮಾತನಾಡಿದರು.
ಇದನ್ನೂ ಓದಿ: Srivathsa Joshi Column: ಬಾಗಿಲನು ತೆರೆದು ಬಹುಮಾನ ಕೊಡೊ ಹರಿಯೇ...
ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರು ಶಿಸ್ತು ಶ್ರದ್ದೆಯಿಂದ ಕಾರ್ಯ ನಿರ್ವಹಿಸಿ, ಉನ್ನತಮಟ್ಟ ತಲುಪಿದರು. ಅವರಂತೆ ನಾವೆಲ್ಲರೂ ಸಹ ಶ್ರದ್ಧೆ ಪ್ರಾಮಾಣಿಕತೆ ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ವೇಳೆ ಸಂಘದ ಪದಾಧಿಕಾರಿಗಳಾದ ಸಿ.ವಿ.ವೆಂಕಟರಾಯಪ್ಪ, ಶ್ರೀಮತಿ ಕೆ.ಅನಿತಾ,ಗಂಗಪ್ಪ, ಎಸ್.ಮಂಜುನಾಥ್, ಕೆ.ವಿ.ಶ್ರೀನಿವಾಸ್, ಲಕ್ಷ್ಮಿಪತಿ, ಟಿ.ಬಿ.ವೆಂಕಟರವಣಪ್ಪ ಹಾಜರಿದ್ದರು.