‘ಗೃಹಮಂತ್ರಿ ಹುದ್ದೆಗೆ ನಾಲಾಯಕ್, ದಲಿತರ ಹೆಸರಿನಲ್ಲಿ ಇನ್ನೆಷ್ಟು ವರ್ಷ ಅಧಿಕಾರ?’
ಸಿದ್ದಾರ್ಥ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಲೂಟಿ ನಡೆದಿದೆ ಎಂದು ಆರೋಪಿ ಸಿರುವ ಅವರು, ಮೀಸಲಾತಿ ಹಾಗೂ ರಾಜಕೀಯ ಪ್ರಾತಿನಿಧ್ಯದ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿದ್ದಾರೆ. ‘ನಿಮ್ಮ ಮೀಸಲು ಕ್ಷೇತ್ರವನ್ನು ದುರ್ಬಲ ದಲಿತರಿಗೆ ಬಿಟ್ಟುಕೊಟ್ಟು ಸಾಮಾನ್ಯ ಕ್ಷೇತ್ರದಿಂದ ಗೆದ್ದು ಬನ್ನಿ
-
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ನಡೆದಿದೆಯೆನ್ನಲಾದ ಸ್ಟಿಂಗ್ ಸಂಚು ಹಾಗೂ ಕೆಪಿಎಸ್ಸಿ ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ(H D Kumaraswamy) ಅವರು ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ನಡೆದ ಆಗ್ನೇಯ ಪದವೀಧರರ ಕ್ಷೇತ್ರದ ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು
ಸ್ಟಿಂಗ್ ಪ್ರಕರಣದ ಅಸಲಿ ಆರೋಪಿಯನ್ನು ಬಿಟ್ಟು ಅಮಾಯಕರ ಬೆನ್ನತ್ತಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಗೃಹಮಂತ್ರಿ ಹುದ್ದೆ(Home Ministry Post)ಯ ನಿರ್ವಹಣೆಯ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ.
‘ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್(Sting) ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್ ಖರ್ಗೆ, ಸ್ಟಿಂಗ್ ಮಾಡಿದ ಅಸಲಿ ಆರೋಪಿಯನ್ನು ಬಿಟ್ಟು ಅಮಾಯಕರ ಬೆನ್ನತ್ತಿದ್ದೀರಿ. ನೀವು ಗೃಹಮಂತ್ರಿ ಹುದ್ದೆಗೆ ನಾಲಾಯಕ್’ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇದನ್ನೂ ಓದಿ: Chikkaballapur News: ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ; ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಿ
ಸಿದ್ದಾರ್ಥ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಲೂಟಿ ನಡೆದಿದೆ ಎಂದು ಆರೋಪಿ ಸಿರುವ ಅವರು, ಮೀಸಲಾತಿ ಹಾಗೂ ರಾಜಕೀಯ ಪ್ರಾತಿನಿಧ್ಯದ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿದ್ದಾರೆ. ‘ನಿಮ್ಮ ಮೀಸಲು ಕ್ಷೇತ್ರವನ್ನು ದುರ್ಬಲ ದಲಿತರಿಗೆ ಬಿಟ್ಟುಕೊಟ್ಟು ಸಾಮಾನ್ಯ ಕ್ಷೇತ್ರದಿಂದ ಗೆದ್ದು ಬನ್ನಿ. ನಿಮಗೆ ಮತ್ತು ನಿಮ್ಮ ತಂದೆಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು? ಇನ್ನೆಷ್ಟು ವರ್ಷ ದಲಿತರ ಹೆಸರಿನಲ್ಲಿ ಅಧಿಕಾರ ನಡೆಸುತ್ತೀರಿ? ಅಸಲಿ ದಲಿತರಿಗೆ ಅಧಿಕಾರ ಕೊಡಿ’ ಎಂದು ಸವಾಲು ಹಾಕಿದ್ದಾರೆ.
ತಮ್ಮ ಬೆಂಬಲಿಗರನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯ ತಮಗಿದೆ ಎಂದು ಹೇಳಿರುವ ಕುಮಾರಸ್ವಾಮಿ, ‘ನನ್ನ ಹುಡುಗರನ್ನು ರಕ್ಷಿಸಿಕೊಳ್ಳುವುದು ನನಗೆ ಗೊತ್ತು. ಓಡುವುದು ನನ್ನ ಜಾಯಮಾನವಲ್ಲ. ನಾನು ಕೆಪಿಎಸ್ಸಿ ಮತ್ತು ಸ್ಟಿಂಗ್ ವಿಷಯ ಪ್ರಸ್ತಾಪಿಸಿದ ಕೂಡಲೇ ಎಷ್ಟು ಕಡೆ ರನ್ನಿಂಗ್ ರೇಸ್ ಮಾಡಿದ್ದೀರಿ ಎಂಬುದು ನನಗೆ ಗೊತ್ತಿದೆ. ಅಂಗಲಾಚುವವನಲ್ಲ ಈ ಕುಮಾರಸ್ವಾಮಿ. ನಿಮ್ಮ ಪೊಲೀಸ್ ಕಮಿಷನರ್ ಬಳಿ ಏನು ಹೇಳಿದ್ದೇನೆ ಎಂಬುದನ್ನು ತಿಳಿದುಕೊಳ್ಳಿ’ ಎಂದು ಹೇಳಿದ್ದಾರೆ.
ಸ್ಟಿಂಗ್ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ‘ನಿಮ್ಮ ಪಕ್ಷದ ಹಿರಿಯ ನಾಯಕನನ್ನು ಸ್ಟಿಂಗ್ ಮಾಡಿದ ಆರೋಪಿ ಯನ್ನು ಬಂಧಿಸುವ ಯೋಗ್ಯತೆ ನಿಮಗಿಲ್ಲ. ಆತ ನಿಮ್ಮ ಡಿಸಿಪಿ ಮುಂದೆ ಕಾಲಿನ ಮೇಲೆ ಕಾಲು ಹಾಕಿಕೊಂಡು ಕೂರುತ್ತಾನೆ. ನಿಮ್ಮ ಇಲಾಖೆಯ ನಿವೃತ್ತ ಐಪಿಎಸ್ ಅಧಿಕಾರಿಗೆ ಕೊಲೆ ಬೆದರಿಕೆ ಹಾಕುತ್ತಾನೆ.
ನಿಮ್ಮ ಪೊಲೀಸ್ ಅಧಿಕಾರಿಗಳ ಸ್ಟಿಂಗ್ ಮಾಡಿ ಹಫ್ತಾ ವಸೂಲಿ ಮಾಡುತ್ತಾನೆ. ಇಂತಹ ವ್ಯಕ್ತಿಯನ್ನು ಹಿಡಿದು ಸೆದೆಬಡಿಯುವ ಬದಲು ಪುಂಗಿ ಬಿಡುತ್ತಿದ್ದೀರಿ’ ಎಂದು ಟೀಕಿಸಿದ್ದಾರೆ.
‘ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ನಲ್ಲಿ ನೀವೂ ಒಂದು ಭಾಗ ಎಂಬುದು ನನಗೆ ಗ್ಯಾರಂಟಿಯಾಗಿದೆ’ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.