23 ರಂದು ಮತದಾನ; ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ನಿರ್ಬಂಧ
ಅ.23ರಂದು ನಡೆಯಲಿರುವ ಮತದಾನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ. ನಿಷೇಧಾಜ್ಞೆ ಅವಧಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ನಡೆಸುವುದು, ಪ್ರತಿಭಟನೆ ಮಾಡು ವುದು, ಶಸ್ತ್ರಾಸ್ತ್ರಗಳನ್ನು ಹಿಡಿದು ಸಂಚರಿಸುವುದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
-
ಚಿಕ್ಕಬಳ್ಳಾಪುರ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅ.21ರ ಸಂಜೆ 4 ಗಂಟೆಯಿಂದ ಅ.23ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ.
ಅ.23ರಂದು ನಡೆಯಲಿರುವ ಮತದಾನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದೆ. ನಿಷೇಧಾಜ್ಞೆ ಅವಧಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ನಡೆಸುವುದು, ಪ್ರತಿಭಟನೆ ಮಾಡು ವುದು, ಶಸ್ತ್ರಾಸ್ತ್ರಗಳನ್ನು ಹಿಡಿದು ಸಂಚರಿಸುವುದು ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಚಟುವಟಿಕೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: Chikkaballapur News: ಬೂದುಗುಂಬಳ, ಹೂವು, ಹಣ್ಣು, ಸಿಹಿ ಖರೀದಿಗೆ ಮುಗಿಬಿದ್ದ ಜನತೆ; ಪ್ರಮುಖ ರಸ್ತೆಗಳಲ್ಲಿ ಹಬ್ಬದ ಕಳೆ
ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಯಲು ಮತಗಟ್ಟೆಗಳ ಸುತ್ತಲಿನ 100 ಮೀಟರ್ ವ್ಯಾಪ್ತಿ ಯಲ್ಲಿ ಚುನಾವಣಾ ಪ್ರಚಾರ ನಡೆಸುವಂತಿಲ್ಲ. ಈ ವ್ಯಾಪ್ತಿಯಲ್ಲಿ ಭಿತ್ತಿಪತ್ರ, ಬ್ಯಾನರ್ ಸೇರಿದಂತೆ ಪ್ರಚಾರ ಸಾಮಗ್ರಿಗಳನ್ನು ಪ್ರದರ್ಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಮತದಾನದ ದಿನ ಮತಗಟ್ಟೆಯೊಳಗೆ ಮೊಬೈಲ್ ಫೋನ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ತೆಗೆದು ಕೊಂಡು ಹೋಗುವುದನ್ನು ನಿಷೇಧಿಸಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ನಿಯಮಾನುಸಾರ ವಿನಾಯಿತಿ ಅನ್ವಯಿಸಲಿದೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮದುವೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅಂತ್ಯಕ್ರಿಯೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಇಂತಹ ಕಾರ್ಯಕ್ರಮಗಳ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ.
ಚುನಾವಣಾ ಪ್ರಚಾರವು ಅ.21ರ ಸಂಜೆ 4 ಗಂಟೆಗೆ ಮುಕ್ತಾಯಗೊಳ್ಳಲಿದ್ದು, ನಂತರ ಕ್ಷೇತ್ರದ ಮತದಾರರಲ್ಲದ ಹೊರಗಿನ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ವಸತಿಗೃಹಗಳು, ಹೋಟೆಲ್ ಗಳು ಹಾಗೂ ಕಲ್ಯಾಣ ಮಂಟಪಗಳಲ್ಲಿರುವವರ ವಿವರಗಳನ್ನು ಪರಿಶೀಲಿಸಿ, ಕ್ಷೇತ್ರದ ಹೊರಗಿನ ವರನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಚುನಾವಣಾ ನೀತಿ ಮತ್ತು ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸ ಲಾಗುವುದು. ಮತದಾರರು ಶಾಂತಿಯುತವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಹಾಗೂ ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.