ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವೈದ್ಯಕೀಯ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಟ್ವಿಟರ್ ನಲ್ಲಿ ತೀವ್ರ ಆಕ್ರೋಶ

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರವಾದ ಚಿಂತಾಮಣಿಯಲ್ಲೇ ಆರೋಗ್ಯ ವ್ಯವಸ್ಥೆಯ ಹದಗೆಟ್ಟ ಸ್ಥಿತಿ ಬಯಲಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ತಮ್ಮ ಟ್ವಿಟರ್ ಹಾಗೂ ಫೇಸ್ಬುಕ್ ಮೂಲಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರವಾದ ಚಿಂತಾಮಣಿಯಲ್ಲೇ ಆರೋಗ್ಯ ವ್ಯವಸ್ಥೆಯ ಹದಗೆಟ್ಟ ಸ್ಥಿತಿ ಬಯಲಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ತಮ್ಮ ಟ್ವಿಟರ್ ಹಾಗೂ ಫೇಸ್ಬುಕ್ ಮೂಲಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. -

Profile
Ashok Nayak May 11, 2026 9:20 PM

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರವಾದ ಚಿಂತಾಮಣಿಯಲ್ಲೇ ಆರೋಗ್ಯ ವ್ಯವಸ್ಥೆಯ ಹದಗೆಟ್ಟ ಸ್ಥಿತಿ ಬಯಲಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್(MP Dr. K. Sudhakar) ತಮ್ಮ ಟ್ವಿಟರ್(Twitter) ಹಾಗೂ ಫೇಸ್ಬುಕ್(facebook) ಮೂಲಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎರಡು ತಿಂಗಳ ಮಗುವಿನ ತಾಯಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆಯನ್ನು ಅತ್ಯಂತ ಹೃದಯವಿದ್ರಾವಕ ಎಂದು ಬಣ್ಣಿಸಿರುವ ಅವರು,ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ.

ಇದನ್ನೂ ಓದಿ: Chinthamani News: ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಈಜು ಕಲೆ ಅಗತ್ಯ: ಕೇಶವ ಅಕಾಡೆಮಿ ಸಂಸ್ಥಾಪಕ  ಅಧ್ಯಕ್ಷ ಕೇಶವ

ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕಾದ ಇಲಾಖೆಯಲ್ಲಿ ದಿನದಿಂದ ದಿನಕ್ಕೆ ನಿರ್ಲಕ್ಷ್ಯ, ಅವ್ಯವಸ್ಥೆ ಮತ್ತು ಹೊಣೆಗಾರಿಕೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಸುಧಾಕರ್ ಆರೋಪಿಸಿದ್ದಾರೆ.

d.k.su

ಜಿಲ್ಲಾ ಉಸ್ತುವಾರಿ ಸಚಿವರ ಸ್ವಕ್ಷೇತ್ರದಲ್ಲೇ ಜನರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಇನ್ನುಳಿದ ಜಿಲ್ಲೆಗಳ ಪರಿಸ್ಥಿತಿ ಏನಾಗಿರಬೇಡ? ಎಂದು ಪ್ರಶ್ನಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದ ಆರೋಪ ಮಾಡಿ ಮೃತದೇಹದೊಂದಿಗೆ ಪ್ರತಿಭಟನೆ ನಡೆಸುತ್ತಿರುವ ಕುಟುಂಬಸ್ಥರ ಸ್ಥಿತಿ ಸರ್ಕಾರದ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

tw

ಈ ಘಟನೆಯನ್ನು ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ.ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ಮೃತ ಮಹಿಳೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಪ್ರಬಲವಾಗಿ ಆಗ್ರಹಿಸಿದ್ದಾರೆ.