ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಕಾರ್ಮಿಕರ ಆರೋಗ್ಯ ವಿಚಾರಿಸಿದ ಜಿಪಂ ಸಿಇಒ

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ಕಾರ್ಮಿಕರ ಕೆಲಸದ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಿಇಒ ಡಾ. ನವೀನ್‌ ಭಟ್, ಕೆಲಸದ ವೇಳೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಆರೋಗ್ಯದ ಕುರಿತು ವಿಚಾರಿಸಿ ದರು. ಸುರಕ್ಷತಾ ಕ್ರಮಗಳನ್ನು ಪಾಲಿಸಿ ಕೆಲಸ ಮಾಡುವಂತೆ ಸಲಹೆ ನೀಡಿದರು.

Gauribidanur News: ಕಾರ್ಮಿಕರ ಆರೋಗ್ಯ ವಿಚಾರಿಸಿದ ಜಿಪಂ ಸಿಇಒ

-

Profile
Ashok Nayak Aug 26, 2026 10:52 PM

ಗೌರಿಬಿದನೂರು: ತಾಲೂಕಿನ ನಕ್ಕಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಸಾಪುರ ಗ್ರಾಮ ದಲ್ಲಿ ನಡೆಯುತ್ತಿರುವ ವಿಬಿಜಿ–ರಾಮ್‌ಜಿ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವೈ.ನವೀನ್‌ ಭಟ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಕೆ.ಹೊನ್ನಯ್ಯ ಪರಿಶೀಲಿಸಿದರು.

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ಕಾರ್ಮಿಕರ ಕೆಲಸದ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಿಇಒ ಡಾ. ನವೀನ್‌ ಭಟ್, ಕೆಲಸದ ವೇಳೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಆರೋಗ್ಯದ ಕುರಿತು ವಿಚಾರಿಸಿದರು. ಸುರಕ್ಷತಾ ಕ್ರಮಗಳನ್ನು ಪಾಲಿಸಿ ಕೆಲಸ ಮಾಡುವಂತೆ ಸಲಹೆ ನೀಡಿದರು.

ಇದನ್ನೂ ಓದಿ: ED raids in Gauribidanur: ಕೆಪಿಎಸ್ಸಿ ಹಗರಣದ ಆರೋಪ: ಗೌರಿಬಿದನೂರಿನಲ್ಲಿ ಅಭ್ಯರ್ಥಿಯ ತಂದೆ ಮನೆ ಮೇಲೆ ಇ.ಡಿ. ದಾಳಿ

ನಂತರ ನರಸಾಪುರ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು ಶೈಕ್ಷಣಿಕ ಪ್ರಗತಿ, ಮೂಲ ಸೌಕರ್ಯ ಹಾಗೂ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾಭ್ಯಾಸ ಹಾಗೂ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಶಾಲೆಯ ಅಡುಗೆ ಕೋಣೆ ಮತ್ತು ಆಹಾರ ಧಾನ್ಯಗಳ ಸಂಗ್ರಹಣಾ ವ್ಯವಸ್ಥೆ ಪರಿಶೀಲಿಸಿ, ಮಕ್ಕಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಒದಗಿಸುವಂತೆ ಸೂಚಿಸಿದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿ ಯಲ್ಲಿ ಪೂರ್ಣಗೊಳ್ಳಬೇಕು. ಸರ್ಕಾರದ ಯೋಜನೆಗಳ ಸೌಲಭ್ಯಗಳು ಅರ್ಹರಿಗೆ ಸಮರ್ಪಕವಾಗಿ ತಲುಪುವಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹುದುಗೂರು ಗ್ರಾಮದ ಎಫ್‌ಎಸ್‌ಟಿಪಿ ಘಟಕ ಹಾಗೂ ಶ್ರೀ ಕ್ಷೇತ್ರ ಮುದುಗಾನಗುಂಟೆ ದೇವಾಲಯದ ಸಿಸಿ ರಸ್ತೆ ಕಾಮಗಾರಿಯನ್ನೂ ಪರಿಶೀಲಿಸಿದರು. ದೇವಾಲಯದ ಆವರಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಆಡಳಿತ ಮಂಡಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಿಡಿಒಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.