ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಏ.24ರಂದು ವರನಟ ಡಾ|| ರಾಜ್ ಕುಮಾರ್ ಜನ್ಮ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ವರನಟ ಡಾ|| ರಾಜ್ ಕುಮಾರ್ ಜನ್ಮ ದಿನಾಚರಣೆಯನ್ನು ಏ.24ರಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ೨ನೇ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ

ಏ.24ರಂದು ವರನಟ ಡಾ|| ರಾಜ್ ಕುಮಾರ್ ಜನ್ಮ ದಿನಾಚರಣೆ

-

Profile
Ashok Nayak Apr 22, 2026 10:35 PM

ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ವರನಟ ಡಾ|| ರಾಜ್ ಕುಮಾರ್ ಜನ್ಮ ದಿನಾಚರಣೆಯನ್ನು ಏ.24ರಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ೨ನೇ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್(Dr.M.C.Sudhakar) ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ. ಪ್ರದೀಪ್ ಈಶ್ವರ್(MLA P.E. Pradeep Eshwar) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: Chikkaballapur News: ಬುದ್ಧ, ಬಸವ ಅಂಬೇಡ್ಕರ್ ಅವರ ಬದುಕು ಬರಹವೇ ನಮ್ಮ ಜೀವನಕ್ಕೆ ಸ್ಪೂರ್ತಿ: ಎಸ್‌ಎಸ್‌ಡಿ ರಾಜ್ಯಾಧ್ಯಕ್ಷ ಜಿ.ಸಿ.ವೆಂಕಟರವಣಪ್ಪ

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ.ಮಲ್ಲೇಶ್ ಬಾಬು, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್. ಸಂಪAಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಆಂಜಿನಪ್ಪ, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್, ಶಾಸಕರುಗಳಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ತು ಶಾಸಕರಾದ ಚಿದಾನಂದ ಎಂ. ಗೌಡ, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ, ಡಾ. ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್ ಶಿವಶಂಕರರೆಡ್ಡಿ, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ.ಕೋಡಿರಂಗಪ್ಪ ಪ್ರಾಸ್ತಾವಿಕ ನುಡಿ ನಡೆಸಿ ಕೊಡಲಿ ದ್ದಾರೆ. ಪತ್ರಕರ್ತರು ಹಾಗೂ ಸಾಹಿತಿ ಟಿ.ಎಸ್.ನಾಗೇಂದ್ರಬಾಬು ಮುಖ್ಯ ಉಪನ್ಯಾಸ ನೀಡಲಿದ್ದಾರೆ.

ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ. ಎನ್. ಮಂಜುಳ ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ, ಕನ್ನಡ ಪರ ಸಂಘಟನೆಗಳು ಮತ್ತು ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ  ಈ ಕಾರ್ಯಕ್ರಮಕ್ಕೆ ಸಮಸ್ತ ನಾಗರಿಕರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.