ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್‌; ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

Chikkamagaluru Tourism Place: ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಎಲ್ಲೆಡೆ ಸಿದ್ಧತೆ ಜೋರಾಗಿದೆ. ಜನರು ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಹೊಸ ವರ್ಷವನ್ನು ಆಚರಿಸಲು ಪ್ಲಾನ್‌ ಮಾಡಿರುತ್ತಾರೆ. ಈಗಾಗಲೇ ರಾಜ್ಯದ ಹಲವಡೆ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದ್ದು, ಆ ಸಾಲಿಗೆ ಚಿಕ್ಕಮಗಳೂರಿನ 22 ಸ್ಥಳಗಳು ಸೇರಿವೆ.

ಹೊಸ ವರ್ಷಕ್ಕೆ  ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

ಸಂಗ್ರಹ ಚಿತ್ರ -

Vishakha Bhat
Vishakha Bhat Dec 30, 2025 1:52 PM

ಚಿಕ್ಕಮಗಳೂರು: ಹೊಸ ವರ್ಷವನ್ನು ಬರ ( New Year Celebration) ಮಾಡಿಕೊಳ್ಳಲು ಎಲ್ಲೆಡೆ ಸಿದ್ಧತೆ ಜೋರಾಗಿದೆ. ಜನರು ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಹೊಸ ವರ್ಷವನ್ನು ಆಚರಿಸಲು ಪ್ಲಾನ್‌ ಮಾಡಿರುತ್ತಾರೆ. ಈಗಾಗಲೇ ರಾಜ್ಯದ ಹಲವಡೆ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದ್ದು, ಆ ಸಾಲಿಗೆ ಚಿಕ್ಕಮಗಳೂರಿನ ಕೆಲ ಪ್ರಾವಾಸಿ ತಾಣಗಳೂ ಇದೀಗ ಸೇರ್ಪಡೆಗೊಂಡಿವೆ. ಜಿಲ್ಲೆಯ ಪ್ರಸಿದ್ಧ 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕವಾಗಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮನವಿಯ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ಹೊಸ ವರ್ಷದ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸಂಚಾರ ದಟ್ಟಣೆ ಮತ್ತು ಅಹಿತಕರ ಘಟನೆಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಯಾವ ತಾಣಗಳಿಗೆ ನಿರ್ಬಂಧ?

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಗಿರಿ, ಗಾಳಿಕೆರೆ, ಕೆಮ್ಮಣ್ಣುಗುಂಡಿ, ಕ್ಯಾತನಮಕ್ಕಿ, ರುದ್ರಪಾದ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೆಬ್ಬೆ ಜಲಪಾತ, ಡೈಮಂಡ್ ಫಾಲ್ಸ್, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಅಬ್ಬುಗುಡಿಗೆ ಫಾಲ್ಸ್, ಹಿರೇಕೊಳಲೆ ಕೆರೆ, ಅಯ್ಯನಕೆರೆ, ಮದಗದಕೆರೆ, ಎತ್ತಿನಭುಜ, ದೇವರಮನೆ, ರಾಣಿಝರಿ, ಬಳ್ಳಾಳರಾಯನ ದುರ್ಗ ಹಾಗೂ ಹೊನ್ನಮ್ಮನಹಳ್ಳಕ್ಕೆ ನಿಷೇಧ ಹೇರಲಾಗಿದೆ.

New Year Celebration: ಹೊಸ ವರ್ಷದ ಆಚರಣೆಗೆ ಈ ತಾಣಗಳಿಗಿಲ್ಲ ಪ್ರವೇಶ

ಹೊಸ ವರ್ಷದ ಸಂದರ್ಭದಲ್ಲಿ ಈಗಾಗಲೇ ಆನ್‌ಲೈನ್ ಮೂಲಕ ಹೋಂ ಸ್ಟೇ ಅಥವಾ ರೆಸಾರ್ಟ್‌ಗಳನ್ನು ಕಾಯ್ದಿರಿಸಿದ ಪ್ರವಾಸಿಗರಿಗೆ ಮಾತ್ರ ಆಯಾ ಸ್ಥಳಗಳಿಗೆ ಹೋಗಲು ಅವಕಾಶವಿರುತ್ತದೆ. ಉಳಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಜಾವರೈನ್ ಚೆಕ್ ಪೋಸ್ಟ್‌ನಿಂದ ಗಿರಿಯ ಮೇಲ್ಭಾಗಕ್ಕೆ ಪ್ರವಾಸಿಗರು ತೆರಳುವುದನ್ನು ನಿರ್ಬಂಧಿಸಲಾಗಿದೆ.‌

ನಂದಿ ಗಿರಿಧಾಮಕ್ಕೆ ನಿಷೇಧ

ನಂದಿಬೆಟ್ಟ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದ್ದು, ಜತೆಗೆ ಹೋಟೆಲ್‌, ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಹೊಸ ವರ್ಷಾಚರಣೆ ಸಂಭ್ರಮಾಚರಣೆಯನ್ನು ಮಧ್ಯರಾತ್ರಿ 12ಕ್ಕೆ ಸೀಮಿತಗೊಳಿಸಲಾಗಿದೆ. ಡಿಸೆಂಬರ್‌ 31 ಮಧ್ಯಾಹ್ನ 2 ಗಂಟೆಯಿಂದ ಜನವರಿ 1, ಬೆಳಗ್ಗೆ 10 ಗಂಟೆವರೆಗೂ ಸಾರ್ವಜನಿಕ ನಿಷೇಧಾಜ್ಞೆಯನ್ನು ಹೇರಲಾಗಿದೆ.