Chikkamagaluru Murder: ಕುಡಿದ ಮತ್ತಿನಲ್ಲಿ ತಂದೆಯನ್ನೇ ಕೊಚ್ಚಿ ಕೊಂದ ಮಗ
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ತಂದೆಯನ್ನು ಮಗನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಂದೆ ಮತ್ತು ಮಲತಾಯಿ ಮತ್ತೆ ಒಂದಾದರೆ ತನ್ನನ್ನು ಮನೆಯಿಂದ ಹೊರಹಾಕಬಹುದು ಎಂದು ತಂದೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನು ಕೊಚ್ಚಿ ಕೊಲೆಗೈದ ಘಟನೆ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ. ತಮ್ಮಯ್ಯ (59) ಮಗನಿಂದಲೇ ಕೊಲೆಯಾದ ದುರ್ದೈವಿ. ಗಣೇಶ್ (29) ಕೊಲೆ ಆರೋಪಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಕುತ್ತಿಗೆ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾನೆ.
ಗಣೇಶ್, ತಮ್ಮಯ್ಯನ ಮೊದಲ ಹೆಂಡತಿಯ ಮಗ ಎಂದು ತಿಳಿದು ಬಂದಿದೆ. ಕೊಲೆಯಾದ ತಮ್ಮಯ್ಯ ಪತ್ನಿ ಸತ್ತ ಬಳಿಕ 2ನೇ ಮದುವೆಯಾಗಿದ್ದ. ಅಪ್ಪ-ಮಗ ಯಾವಾಗಲೂ ಕುಡಿಯುತ್ತಾರೆ ಎಂದು ಪತ್ನಿ ಮನೆ ಬಿಟ್ಟು ಹೋಗಿದ್ದಳು. ಸೆ.19 ರಂದು ಪತ್ನಿಗೆ ಮನೆಗೆ ಬರುವಂತೆ ತಮ್ಮಯ್ಯ ಹೇಳಿದ್ದ. ಇಬ್ಬರು ಒಂದಾದರೆ ನನ್ನನ್ನು ಮನೆಯಿಂದ ಹೊರಗೆ ಹಾಕುತ್ತಾರೆ ಎಂದು ಆರೋಪಿ ಈ ಕೃತ್ಯ ಎಸಗಿದ್ದಾನೆ. ಈ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರು- ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಾಯ
ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರಿದ್ದ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ (Ramanath Rai's Car accident) ಕಾರ್ಕಳದ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ. ಘಟನೆಯಲ್ಲಿ ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಕಾರು ಚಾಲಕ ಮತ್ತು ಆಪ್ತ ಸಹಾಯಕ ಗಾಯಗೊಂಡಿದ್ದಾರೆ.
ಕಾರ್ಕಳ - ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.