Chikkamagaluru: ಹಿಂದೂ ಗೃಹಿಣಿ ಮನೆಯಲ್ಲಿ ಅರೆಬೆತ್ತಲಾಗಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್ ಮುಖಂಡ, ಹಲ್ಲೆ
ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹಿಂದೂ ಹುಡುಗರು, ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ -
ಚಿಕ್ಕಮಗಳೂರು, ಫೆ.05 : ವಿವಾಹಿತ ಹಿಂದೂ ಮಹಿಳೆಯ ಜೊತೆ ಅರೆಬೆತ್ತಲೆಯಾಗಿ ಕೋಣೆಯೊಂದರಲ್ಲಿ ಕಾಣಿಸಿಕೊಂಡ ಮುಸ್ಲಿಂ ಕಾಂಗ್ರೆಸ್ ಮುಖಂಡನ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿರುವ ಘಟನೆ ಚಿಕ್ಕಮಗಳೂರು (Chikkamagaluru news) ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ವೇಳೆ ಹಿಂದೂ ಮಹಿಳೆಯೊಂದಿಗೆ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಇರುವುದನ್ನು ಕಂಡು ಹಿಂದೂ ಯುವ ಸಂಘಟನೆಯವರು ಕೋಪಗೊಂಡು ಆತನನ್ನು ಹಿಡಿದು ಥಳಿಸಿದ್ದಾರೆ.
ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹಿಂದೂ ಹುಡುಗರು, ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.
ಘಟನೆ ಬಗ್ಗೆ ವಿಡಿಯೋ ಮಾಡಿ ಮಾಹಿತಿ ಹಂಚಿಕೊಂಡಿರುವ ನೊಂದ ಮಹಿಳೆ, ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು. ಈ ವೇಳೆ ಅಕ್ಕ ಪಕ್ಕದ ಮನೆಯವರು ನನ್ನ ಮನೆಗೆ ಬಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಅಂತ ಆರೋಪಿಸಿದ್ದಾರೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸ್‌ನವರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಗುರುಮಠಕಲ್‌ನಲ್ಲಿ ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ; ಕೇಸ್ ದಾಖಲು