ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Girl Missing: ಮುಳ್ಳಯ್ಯನಗಿರಿಯಲ್ಲಿ ನಾಪತ್ತೆಯಾದ ಹುಡುಗಿಗಾಗಿ ಡ್ರೋನ್‌ ಹುಡುಕಾಟ

ಇಂದು ಬೆಳಗ್ಗೆ ಮತ್ತೆ 50ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅರಣ್ಯ ಇಲಾಖೆ ಡ್ರೋನ್ ಮೂಲಕ ಬಾಲಕಿಯ ಪತ್ತೆಗೆ ಮುಂದಾಗಿದ್ದಾರೆ. ಬಾಲಕಿ ನಾಪತ್ತೆಯಾದ ಸ್ಥಳದಿಂದ ಹೋಗಿರಬಹುದಾದ ಮಾರ್ಗದ ಅಂದಾಜಿನಲ್ಲಿ ಜಿಲ್ಲಾಡಳಿತದ ವಿವಿಧ ಇಲಾಖೆಯ ಅಧಿಕಾರಿಗಳು ತಂಡಗಳಾಗಿ ಬಾಲಕಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.

ಮುಳ್ಳಯ್ಯನಗಿರಿಯಲ್ಲಿ ನಾಪತ್ತೆಯಾದ ಹುಡುಗಿಗಾಗಿ ಡ್ರೋನ್‌ ಹುಡುಕಾಟ

ನಾಪತ್ತೆಯಾದ ಶ್ರೀನಂದನ -

ಹರೀಶ್‌ ಕೇರ
ಹರೀಶ್‌ ಕೇರ Apr 8, 2026 12:10 PM

ಚಿಕ್ಕಮಗಳೂರು, ಏ.08: ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗದಲ್ಲಿ ನಾಪತ್ತೆಯಾದ ಕೇರಳದ ಹುಡುಗಿಗಾಗಿ ಇಂದು ಡ್ರೋನ್‌ ಇತ್ಯಾದಿ ಬಳಸಿ ಹುಡುಕಾಟ ನಡೆದಿದೆ. ಕೇರಳದಿಂದ (Kerala) ಚಿಕ್ಕಮಗಳೂರು (Chikkamagaluru) ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿದ್ದ 16 ವರ್ಷದ ವಿದ್ಯಾರ್ಥಿನಿ (Student) ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಿನ್ನೆ ನಾಪತ್ತೆಯಾಗಿದ್ದಳು.

ಶ್ರೀನಂದನ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದ 30ಕ್ಕೂ ಹೆಚ್ಚು ಸಿಬ್ಬಂದಿ ಟಾರ್ಚ್ ಹಾಕಿಕೊಂಡು ಮಧ್ಯರಾತ್ರಿವರೆಗೂ ಹುಡುಕಾಡಿದರೂ ಬಾಲಕಿಯ ಸುಳಿವು ಸಿಗಲಿಲ್ಲ. ಬೆಟ್ಟಗುಡ್ಡಗಳ ಕಾಡಿನ ಪ್ರದೇಶ, ಮಂಜು ಹಾಗೂ ಭಾರೀ ಕತ್ತಲು ಕವಿದಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿ ಎಲ್ಲರೂ ವಾಪಸ್ಸಾಗಿದ್ದರು. ಸ್ಥಳಕ್ಕೆ ಮಧ್ಯರಾತ್ರಿಯೇ ಎಎಸ್ಪಿ ಜಯಕುಮಾರ್ ಕೂಡ ಭೇಟಿ ನೀಡಿದ್ದರು.

Woman missing: ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಯುವತಿ ನಾಪತ್ತೆ

ಇಂದು ಬೆಳಗ್ಗೆ ಮತ್ತೆ 50ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅರಣ್ಯ ಇಲಾಖೆ ಡ್ರೋನ್ ಮೂಲಕ ಬಾಲಕಿಯ ಪತ್ತೆಗೆ ಮುಂದಾಗಿದ್ದಾರೆ. ಬಾಲಕಿ ನಾಪತ್ತೆಯಾದ ಸ್ಥಳದಿಂದ ಹೋಗಿರಬಹುದಾದ ಮಾರ್ಗದ ಅಂದಾಜಿನಲ್ಲಿ ಜಿಲ್ಲಾಡಳಿತದ ವಿವಿಧ ಇಲಾಖೆಯ ಅಧಿಕಾರಿಗಳು ತಂಡಗಳಾಗಿ ಬಾಲಕಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.