Self Harming: ಅಪಘಾತದಲ್ಲಿ ನದಿಗುರುಳಿ ಮಗ ಸಾವು, ನೊಂದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ
Chikkamagaluru: ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಗ ಶಮಂತ್, ತಾಯಿ ರವಿಕಲಾ

ಚಿಕ್ಕಮಗಳೂರು: ಅಪಘಾತದಲ್ಲಿ (Road Accident) ಮಗ ಸಾವಿಗೀಡಾದ್ದದಿಂದ ಮನನೊಂದ ತಾಯಿ, ಮಗನ ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ (Self harming) ಶರಣಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.
ಮಲೆನಾಡಿನಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ರಸ್ತೆಯ ಮೇಲಿನ ನಿಯಂತ್ರಣ ತಪ್ಪಿ ಪಿಕಪ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ (Bhadra River) ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ. ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು.
ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Nandan Bhat: ಆತ್ಮಹತ್ಯೆಗೆ ಯತ್ನಿಸಿದ್ದ ಕಿರುತೆರೆ ಕಲಾವಿದ ನಂದನ್ ಭಟ್ ಸಾವು