ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BSY Abhimanotsava: ಚಿತ್ರದುರ್ಗದಲ್ಲಿ ಬಿಎಸ್‌ವೈ ಪುರಪ್ರವೇಶ; ಬೃಹತ್‌ ಮೆರವಣಿಗೆ ಮೂಲಕ ಅದ್ಧೂರಿ ಸ್ವಾಗತ

BS Yediyurappa Abhimanotsava: ಬಿಜೆಪಿ ಹಿರಿಯ ನಾಯಕ, ರೈತನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 50 ವರ್ಷ ಯಶಸ್ವಿ ರಾಜಕೀಯ ಜೀವನ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ʼಬಿಎಸ್‌ವೈ ಅಭಿಮಾನೋತ್ಸವʼ ಕಾರ್ಯಕ್ರಮವನ್ನು ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ನಾಳೆ ಹಮ್ಮಿಕೊಳ್ಳಲಾಗಿದೆ.

Prabhakara R
Prabhakara R May 8, 2026 7:47 PM

ಚಿತ್ರದುರ್ಗ: ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ. ಎಸ್.‌ ಯಡಿಯೂರಪ್ಪ ಅವರು ಜನಸೇವೆಯಲ್ಲಿ 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಾಳೆ (ಮೇ 9) ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ (BSY Abhimanotsava) ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ಇಂದು ಸಂಜೆ ಬಿಎಸ್‌ವೈ ಪುರಪ್ರವೇಶ ನಡೆದಿದ್ದು, ಪೂರ್ಣಕುಂಭ ಹೊತ್ತ ಮಹಿಳೆಯರು, ಜಾನಪದ ಕಲಾತಂಡಗಳೊಂದಿಗೆ ಸಾವಿರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಮುಖಂಡರು, ರೈತರು ಅದ್ಧೂರಿಯಾಗಿ ಯಡಿಯೂರಪ್ಪ ಅವರನ್ನು ಸ್ವಾಗತಿಸಿದರು. ನಗರದ ಕನಕವೃತ್ತದಿಂದ ಮದಕರಿ ವೃತ್ತದವರೆಗೆ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.