ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Road Accident: ಲಾರಿಗೆ ಕಾರು ಡಿಕ್ಕಿ, ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ಸಾವು, ಇಬ್ಬರು ಗಂಭೀರ

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕಾರಿನ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮಂತ್ರಾಲಯದಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ, ಮೂವರು ದು‌ರ್ಮರಣ

ಲಾರಿಗೆ ಕಾರು ಡಿಕ್ಕಿ -

ಹರೀಶ್‌ ಕೇರ
ಹರೀಶ್‌ ಕೇರ Feb 27, 2026 7:41 AM

ಚಿತ್ರದುರ್ಗ, ಫೆ.27: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ (Lorry) ಕಾರೊಂದು (Car) ವೇಗವಾಗಿ ಬಂದು ಡಿಕ್ಕಿಯಾದ ಪರಿಣಾಮ (road accident) ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere) ತಾಲೂಕಿನ ಹಿರೆಹಳ್ಳಿ ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕಾರಿನ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಲ್ಲಿದ್ದ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35), ಲೋಹಿತ್ (40) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕನ ಬದಿಯಲ್ಲಿ ಕುಳಿತಿದ್ದವರ ತಲೆ ಕಟ್ ಆಗಿದ್ದು, ಉಳಿದ ಇಬ್ಬರು ಗಂಭಿರವಾಗಿ ಗಾಯಗೊಂಡು ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬAಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident: ಬುಲೆಟ್‌ ಬೈಕ್‌ನಲ್ಲಿ ತ್ರಿಬಲ್‌ ರೈಡ್‌, ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು