ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ನಿಂದ 2000 ಕೋಟಿ ರೂ. ಸಂಗ್ರಹಿಸಿದ ವೀರೇಂದ್ರ ಪಪ್ಪಿ, ಮತ್ತೆ 55 ಕೋಟಿ ವಶ

ED Raid: ಶಾಸಕ ವೀರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಒಟ್ಟು 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂ. ಜಪ್ತಿ ಮಾಡಿದ್ದಾರೆ.

ಆನ್‌ಲೈನ್‌ ಬೆಟ್ಟಿಂಗ್‌ನಿಂದ 2000 ಕೋಟಿ ರೂ. ಸಂಗ್ರಹಿಸಿದ ವೀರೇಂದ್ರ ಪಪ್ಪಿ!

-

ಹರೀಶ್‌ ಕೇರ ಹರೀಶ್‌ ಕೇರ Sep 4, 2025 8:09 AM

ಚಿತ್ರದುರ್ಗ : ಅಕ್ರಮ ಬೆಟ್ಟಿಂಗ್, ಆನ್‌ಲೈನ್ ಗೇಮಿಂಗ್ (Online betting) ದಂಧೆ ಆರೋಪದ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ (Chitradurga) ಕಾಂಗ್ರೆಸ್ ಶಾಸಕ (Congress MLA) ಕೆ.ಸಿ ವೀರೇಂದ್ರ ಪಪ್ಪಿ (KC Veerendra Puppy) ಅವರ ನಿವಾಸದ ಮೇಲೆ ದಾಳಿ (ED raid) ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ವಿರೇಂದ್ರ ಕೊಟ್ಟ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ಮನೆ, ಬ್ಯಾಂಕ್ ಅಕೌಂಟ್‌ಗಳ ಶೋಧ ನಡೆಸಿದ್ದಾರೆ. ಇದೀಗ ಇಡಿ ಅಧಿಕಾರಿಗಳು ನಿನ್ನೆ ಮತ್ತೆ ದಾಳಿ ನಡೆಸಿ ಆರು ಐಷಾರಾಮಿ ಕಾರುಗಳು ಹಾಗೂ ಅಕೌಂಟಿನಲ್ಲಿದ್ದ 55 ಕೋಟಿ ರೂಪಾಯಿ ಜಪ್ತಿ ಮಾಡಿಕೊಂಡಿದ್ದಾರೆ.

ಶಾಸಕ ವೀರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಒಟ್ಟು 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಅಲ್ಲದೇ 5 ದುಬಾರಿ ವಾಹನಗಳನ್ನು ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ.

ಚಳ್ಳಕೆರೆ ನಗರದ ಕೋಟೆಕ್ ಮಹೇಂದ್ರ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್‌ಗೆ ಇ.ಡಿ ಅಧಿಕಾರಿಗಳು ತೆರಳಿದ್ದರು. ಆ ಬ್ಯಾಂಕ್‌ನಲ್ಲಿ ವೀರೇಂದ್ರ ಪಪ್ಪಿ ಹಾಗೂ ಅವರ ಕುಟುಂಬ ಸದಸ್ಯರ ಹಣ ವರ್ಗಾವಣೆ ಬಗ್ಗೆ ಮಾಹಿತಿ, ದಾಖಲೆಯನ್ನ ಕೂಡ ಕಲೆ ಹಾಕಿದ್ದು, ಹಲವು ಬ್ಯಾಂಕ್ ಖಾತೆಗಳ ಮೂಲಕ ಆಗಿರುವ ಹಣಕಾಸು ವರ್ಗಾವಣೆ ಬಗ್ಗೆ ಮಾಹಿತಿ, ದಾಖಲೆಯನ್ನು ಸಂಗ್ರಹಿಸಿದ್ದರು. ಜೊತೆಗೆ ಬೆಟ್ಟಿಂಗ್ ಆಪ್‌ಗಳ ಮೂಲಕ ಗಳಿಸಿದ ಹಣವನ್ನು ಈ ಬ್ಯಾಂಕ್ ಖಾತೆಗಳ ಮೂಲಕ ವರ್ಗಾವಣೆ ಮಾಡುವ ಮೂಲಕ ಅಕ್ರಮ ವ್ಯವಹಾರ ನಡೆಸಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದಾರೆ.

ಇದೀಗ ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೊಂದು ಸ್ಪೋಟಕವಾದ ಆರೋಪ ಮಾಡಿದ್ದು, ಆನ್ಲೈನ್ ಬೆಟ್ಟಿಂಗ್ ಆಪ್‌ಗಳ ಮೂಲಕ ವೀರೇಂದ್ರ ಪಪ್ಪಿ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಸುಮಾರು 2000 ಕೋಟಿ ರೂಪಾಯಿಗೂ ಅಧಿಕ ಹಣ ಸಂಪಾದನೆ ಮಾಡಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ದುಬೈಯಲ್ಲಿರುವ ಅವರ ಸಹಚರರು ಕೂಡ ಈ ದಂಧೆ ನಡೆಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: KC Veerendra Pappi: ಶಾಸಕ ವಿರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ; ಆರು ಐಷಾರಾಮಿ ಕಾರುಗಳು ವಶಕ್ಕೆ