Self Harming: ಮಗಳನ್ನು ಪತ್ತೆ ಹಚ್ಚಲು ಪೊಲೀಸರ ನಿರ್ಲಕ್ಷ್ಯ; ವಿಷ ಸೇವಿಸಿದ ತಂದೆ ಸಾವು
Self Harming: ಪುತ್ರಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಅಜ್ಜಯ್ಯ ಠಾಣೆಗೆ ದೂರು ನೀಡಲು ತೆರಳಿದ್ದಾರೆ. ಒಂದು ಬಾರಿ ಪುತ್ರಿಯನ್ನು ಭೇಟಿ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಪೊಲೀಸರು ದೂರು ತೆಗೆದುಕೊಳ್ಳದೆ ಅವರನ್ನು ಅಲೆದಾಡಿಸಿದ್ದಾರೆ.


ಚಿತ್ರದುರ್ಗ: ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ಠಾಣೆ ಎದುರು ಆತ್ಮಹತ್ಯೆಗೆ (Self harming) ಯತ್ನಿಸಿದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಜ್ಜಯ್ಯ (45) ಎಂಬವರು ಇದೀಗ ಸಾವನ್ನಪ್ಪಿದ್ದಾರೆ. ಮಗಳ ಕುರಿತು ತನ್ನ ದೂರಿಗೆ ಸ್ಪಂದಿಸದ ಹೊಳಲ್ಕೆರೆ ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ಅಜ್ಜಯ್ಯ ಆತ್ಮಹತ್ಯೆಗೆ ಯತ್ನಿಸಿದ್ದರು.
ಪುತ್ರಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಅಜ್ಜಯ್ಯ ಠಾಣೆಗೆ ದೂರು ನೀಡಲು ತೆರಳಿದ್ದಾರೆ. ಒಂದು ಬಾರಿ ಪುತ್ರಿಯನ್ನು ಭೇಟಿ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಪೊಲೀಸರು ದೂರು ತೆಗೆದುಕೊಳ್ಳದೆ ಅವರನ್ನು ಅಲೆದಾಡಿಸಿದ್ದಾರೆ. ಮನನೊಂದು ಅಜ್ಜಯ್ಯ ಪೊಲೀಸ್ ಠಾಣೆಯ ಬಳಿಯೇ ವಿಷ ಸೇವಿಸಿದ್ದರು. ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಅಜ್ಜಯ್ಯ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆ ಪೊಲೀಸರ ವಿರುದ್ಧ ಅಜ್ಜಯ್ಯ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.
ಆನ್‌ಲೈನ್ ಬೆಟ್ಟಿಂಗ್‌ಗೆ ಬ್ಯಾಂಕ್ ಸಾಲ ಮಾಡಿ ಕಳೆದುಕೊಂಡ ಉದ್ಯೋಗಿ ಆತ್ಮಹತ್ಯೆ
ಬೆಂಗಳೂರು : ಲಕ್ಷಗಟ್ಟಲೆ ಹಣ ಸಾಲ ಮಾಡಿಕೊಂಡು ಅದನ್ನು ಆನ್‌ಲೈನ್ ಬೆಟ್ಟಿಂಗ್‌ಗೆ (Online Betting) ಚೆಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನಲ್ಲಿ (bengaluru) ಖಾಸಗಿ ಬ್ಯಾಂಕ್ ಉದ್ಯೋಗಿ ಒಬ್ಬರು ತಾನು ಕೆಲಸ ಮಾಡುವ ಬ್ಯಾಂಕ್‌ನಲ್ಲೆ ಸಾಲ ಪಡೆದು ಸಾಲ (loan) ತೀರಿಸಲಾಗದೆ ಬೆಟ್ಟಿಂಗ್‌ನಲ್ಲಿ ಸೋತು ಮನನೊಂದು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಮನೋಜ್ ಕುಮಾರ್ (25) ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಿಂದ ಲೋನ್ ಪಡೆದು ಮೃತ ಮನೋಜ್ ಕುಮಾರ್ ಬೆಟ್ಟಿಂಗ್ ಆಡುತ್ತಿದ್ದರು. ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡಿದ್ದ ಮನೋಜ್ ಕುಮಾರ್ ಮನನೊಂದು ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Road Accident: ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಸರಣಿ ಅಪಘಾತ, ಮೂವರು ಸಾವು