Himachal flood: ಪ್ರವಾಹ ಪೀಡಿತ ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ. ನೆರವು ಘೋಷಿಸಿದ ಸಿಎಂ ಸಿದ್ದರಾಮಯ್ಯ
CM Siddaramaiah: ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ 5 ಕೋಟಿ ರೂ. ನೆರವು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದು, ಕರ್ನಾಟಕವು ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ಸಂಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿದ್ದೇವೆ ಎಂದು ಭರವಸೆ ನೀಡಿದ್ದಾರೆ.

-

ಬೆಂಗಳೂರು: ಭಾರಿ ಮಳೆ ಮತ್ತು ಪ್ರವಾಹದಿಂದ ನಲುಗಿರುವ ಹಿಮಾಚಲ ಪ್ರದೇಶದ (Himachal flood) ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ 5 ಕೋಟಿ ರೂ. ನೆರವು ನೀಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ. ಅಪಾರ ಆಸ್ತಿ ಹಾನಿ ಸಂಭವಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕರ್ನಾಟಕದ ಜನರು ನಿಮ್ಮೊಂದಿಗೆ (ಹಿಮಾಚಲದ ಜನರೊಂದಿಗೆ) ನಿಲ್ಲುತ್ತಾರೆ. ಬೆಂಬಲದ ಸಂಕೇತವಾಗಿ, ನಮ್ಮ ಸರ್ಕಾರ ವಿಪತ್ತು ಪರಿಹಾರ ಮತ್ತು ಪುನರ್ವಸತಿಗಾಗಿ ₹5 ಕೋಟಿ ನೆರವು ನೀಡಿದೆ ಎಂದು ಬರೆದುಕೊಂಡಿದ್ದಾರೆ.
The devastating floods in Himachal Pradesh have caused immense loss of lives, homes and livelihoods. The people of Karnataka share this pain and stand in solidarity with the people of Himachal.
— Siddaramaiah (@siddaramaiah) September 14, 2025
As a gesture of support, our Govt is contributing ₹5 crore towards relief and… pic.twitter.com/kaOwwt2iez
ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ಸಂಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Cloudburst: ಉತ್ತರಾಖಂಡದ ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ