CM Siddaramaiah: ಎಲ್ಲಾ ದಲಿತ, ಹಿಂದುಳಿದ ಮಠಗಳಿಗೆ ಅನುದಾನ: ಸಿಎಂ ಸಿದ್ದರಾಮಯ್ಯ ಭರವಸೆ
CM Siddaramaiah: ಹಿಂದುಳಿದ ಹಾಗೂ ದಲಿತ ಮಠಾಧೀಶ್ವರರ ಒಕ್ಕೂಟದ ಸ್ವಾಮೀಜಿಗಳ ನಿಯೋಗವು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಕುರಿತು ಚರ್ಚಿಸಿದರು. ಸ್ವಾಮೀಜಿಗಳ ನಿಯೋಗದ ಬೇಡಿಕೆಯಂತೆ ಎಲ್ಲ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.


ಬೆಂಗಳೂರು: ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದರು. ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು. ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.
ಈ ಸುದ್ದಿಯನ್ನೂ ಓದಿ | Karnataka Rains: ಮುಂದಿನ ಎರಡು ದಿನ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ
CM Siddaramaiah: ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯ: ಸಿದ್ದರಾಮಯ್ಯ
ಬೆಂಗಳೂರು: ಆರ್ಥಿಕ ಇಲಾಖೆಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ. ಆದರೆ ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದರು. ತೆರಿಗೆ ವಂಚಿಸುವವರನ್ನು ಪತ್ತೆ ಹಚ್ಚಲು, ತೆರಿಗೆ ಸೋರಿಕೆ ತಡೆಯಲು ಅಗತ್ಯವಾದ ಎಲ್ಲಾ ಅನುಕೂಲಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ದವಿದೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.
ವೇತನ ಆಯೋಗ ಶಿಫಾರಸ್ಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೆ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ ಇಷ್ಟೇ ಪ್ರಮಾಣದಲ್ಲಿ ಕರ್ತವ್ಯ ನಿರೀಕ್ಷಿಸುತ್ತೇನೆ. ತೆರಿಗೆ ಸಂಗ್ರಹದಲ್ಲಿ ಗುರಿ ತಲುಪಲೇಬೇಕು ಎಂದು ತಿಳಿಸಿದರು.
ನಮಗೆ 11495 ಕೋಟಿ ರೂಪಾಯಿ ಹದಿನೈದನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಹಣಕಾಸು ಸಚಿವೆ ಘೋಷಣೆ ಮಾಡಿದ್ದ ಹಣದಲ್ಲಿ ನಯಾ ಪೈಸೆಯನ್ನೂ ರಾಜ್ಯಕ್ಕೆ ಕೊಡಲಿಲ್ಲ ಎಂದು ಸಿಎಂ ಆರೋಪಿಸಿದರು.
ನಾವು ಗ್ಯಾರಂಟಿಗಳಿಗೆ ಹಣ ತೆಗೆದಿಟ್ಟಿದ್ದೀವಿ. ಜತೆಗೆ 83 ಸಾವಿರ ಕೋಟಿಯನ್ನು ಬಂಡವಾಳ ವೆಚ್ಚಕ್ಕೆ ತೆಗೆದಿರಿಸಿದ್ದೀವಿ. ಕಳೆದ ವರ್ಷ ನಾವು 52 ಸಾವಿರ ಕೋಟಿ ಬಂಡವಾಳ ವೆಚ್ಚ ಮಾಡಿದ್ದೆವು. ಈ ವರ್ಷ 31 ಸಾವಿರ ಕೋಟಿ ಹೆಚ್ಚಿನ ಬಂಡವಾಳ ವೆಚ್ಚ ಕೊಟ್ಟಿದ್ದೀವಿ. ಆದರೂ, ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಈ ಸುದ್ದಿಯನ್ನೂ ಓದಿ | Chitrasanthe Award: ಮೇ 18ರಂದು ʼಚಿತ್ರಸಂತೆʼ ಪ್ರಶಸ್ತಿ ಪ್ರದಾನ ಸಮಾರಂಭ