CM Siddaramaiah: ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ, ʼಬೆಸ್ಟ್ ಆಫ್ ಲಕ್ʼ ಎಂದ ಡಿಕೆ ಶಿವಕುಮಾರ್
ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸೇರಿ ಎಲ್ಲದರ ಬಗ್ಗೆಯೂ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುತ್ತದೆ. ಅದರ ಬಗ್ಗೆ ಇಲ್ಲಿಯವರೆಗೆ ಹೈಕಮಾಂಡ್ ಮಾತನಾಡಿಲ್ಲ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮತ್ತೆ ಮತ್ತೆ ಪ್ರಶ್ನೆ ಕೇಳಬೇಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. 'ನಾವು ಸಿದ್ದರಾಮಯ್ಯ ಅವರ ಜೊತೆಯಾಗಿ ಕೆಲಸ ಮಾಡುತ್ತೇವೆʼ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ -
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಪಟ್ಟದ ಸುತ್ತಮುತ್ತ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ʼಮುಂದಿನ ಎರಡೂವರೆ ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಇರಲಿದ್ದೇನೆ. ಬಜೆಟ್ ಕೂಡ ಮಂಡಿಸುತ್ತೇನೆ. ನಿಮಗೆ ಯಾವುದೇ ಅನುಮಾನ ಬೇಡʼ ಎಂದು ಸಿಎಂ ಸಿದ್ಧರಾಮಯ್ಯ ( CM Siddaramaiah) ಘೋಷಿಸಿದ್ದಾರೆ. ʼಅವರಿಗೆ ಬೆಸ್ಟ್ ಆಫ್ ಲಕ್ ಹೇಳ್ತೇನೆʼ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ಮೈಸೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಇನ್ನೂ ಎರಡೂವರೆ ವರ್ಷ ಸಿಎಂ ಆಗಿರಲಿದ್ದೇನೆ. ಎರಡು ಬಜೆಟ್ ಕೂಡ ಮಂಡಿಸುತ್ತೇನೆ. ಮತ್ತೆ ಮತ್ತೆ ಸಿಎಂ ಬದಲಾವಣೆ ಬಗ್ಗೆ ಯಾಕೆ ಕೇಳುತ್ತೀರಿ? ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ಯಾ ಎಂಬುದಾಗಿ ಪ್ರಶ್ನಿಸಿದರು.
ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸೇರಿ ಎಲ್ಲದರ ಬಗ್ಗೆಯೂ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುತ್ತದೆ. ಅದರ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾತನಾಡಿದೆಯಾ? ಇಲ್ಲ ತಾನೇ? ಹಾಗಿದ್ದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮತ್ತೆ ಮತ್ತೆ ಯಾಕೆ ಪ್ರಶ್ನೆ ಕೇಳುತ್ತೀರಿ ಎಂದರು.
ಬೆಸ್ಟ್ ಆಫ್ ಲಕ್: ಡಿಕೆಶಿ
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಚೀಫ್ ಮಿನಿಸ್ಟರ್ ಆಗಿ ನಾನೇ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರಿಗೆ ಶುಭಾಶಯ ಹೇಳುತ್ತೇನೆ. ಅವರಿಗೆ ಒಳ್ಳೆಯದಾಗಲಿ. ನಾವು ಅವರ ಜೊತೆಗೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಾನು ಬಣ ಕಟ್ಟುವವನಲ್ಲ, ನಾನು ಯಾವುದೇ ಬಣದಲ್ಲಿ ಇಲ್ಲ. ಬಣಗಾರಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಕೆಲವೇ ಶಾಸಕರಿಗಲ್ಲ, ಎಲ್ಲ ನೂರ ನಲುವತ್ತು ಶಾಸಕರಿಗೂ ಅಧ್ಯಕ್ಷ ಎಂದರು. ಕಳೆದ ಎರಡೂವರೆ ವರ್ಷಗಳಿಂದ ಸಾಕಷ್ಟು ಔತಣಕೂಟ ನಡೆದಿದೆ. ನಾಲ್ವರು ಡಿಸಿಎಂ ಮಾಡಬೇಕು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಸಬೇಕು. ಸಂಪುಟಕ್ಕೆ ತಮ್ಮನ್ನು ಸೇರಿಸಿಕೊಳ್ಳಬೇಕೆಂದು ಸಾಕಷ್ಟು ಡಿನ್ನರ್ ಸಭೆ ನಡೆದಿವೆ. ಸಚಿವರ ಡಿನ್ನರ್ ಕೂಡ ಅದರ ಒಂದು ಭಾಗವೇ ಎಂದು ಹೇಳಿದ್ದಾರೆ.
ಇದನ್ನೂ ಓದಿ: Next Karnataka CM: ಸಿದ್ದರಾಮಯ್ಯ ಸಿಎಂ ಆಗಿರುವಷ್ಟೂ ದಿನ ಅವರೇ ಸಿಎಂ: ಡಿ.ಕೆ. ಸುರೇಶ್