PM Narendra Modi: ಬೆಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಸ್ವಾಗತ, 18 ಬೇಡಿಕೆಗಳ ಮನವಿ ಪತ್ರ ಸಲ್ಲಿಕೆ
ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಭೈರೆಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.
ಸಾಂದರ್ಭಿಕ ಚಿತ್ರ -
ಬೆಂಗಳೂರು.ಏ.15: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಇಂದು ಭೇಟಿ ನೀಡಿದರು. ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಇಳಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ವಾಗತಿಸಿದರು. ಇದೇ ವೇಳೆ 18 ಬೇಡಿಕೆಗಳನ್ನು ಹೊಂದಿರುವ ಮನವಿ ಪತ್ರವನ್ನು ಸಿಎಂ ಅವರು ಪ್ರಧಾನಿಗೆ ನೀಡಿದ್ದಾರೆ.
ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಮೋದಿ ಸೇನಾ ಹೆಲಿಕ್ಯಾಪ್ಟರ್ ಮೂಲಕ ಆದಿಚುಂಚನಗಿರಿಗೆ ತೆರಳಿದರು. ಇದಕ್ಕಾಗಿ ಭದ್ರತಾ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿಮಾನ ನಿಲ್ದಾಣದಿಂದ ಹೆಲಿಪ್ಯಾಡ್‌ವರೆಗೆ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಭೈರೆಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.
PM Narendra Modi: ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ, ಭೈರವೈಕ್ಯ ಮಂದಿರ ಉದ್ಘಾಟನೆಗೆ ಸಜ್ಜು
ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಪ್ರಧಾನಿಯನ್ನು ಬರಮಾಡಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಆಗಮಿಸಿ, ಪ್ರಧಾನಿಗೆ ಆತ್ಮೀಯ ಸ್ವಾಗತ ಕೋರಿದರು. ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಒಟ್ಟು 30 ಮಂದಿ ಗಣ್ಯರು ಹಾಗೂ ಅಧಿಕಾರಿಗಳು ಅವರನ್ನು ಸ್ವಾಗತಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆದಿಚುಂಚನಗಿರಿಗೆ ಬಂದಿಳಿದು, ಗಿರಿಯ ಆರಾಧ್ಯ ದೈವ ಕಾಲಭೈರವೇಶ್ವರನಿಗೆ ವಿಶೇಷವಾದ ಪೂಜೆ ಸಲ್ಲಿಸಿದರು. ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಪೀಠದ 71ನೇ ಯತಿ ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯುಳ್ಳ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ.
PM Narendra Modi: ನಾಳೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಹೈ ಅಲರ್ಟ್, ಸಂಚಾರ ಬದಲಾವಣೆ, ಮದ್ಯ ಮಾರಾಟ ನಿಷೇಧ