ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste census: ಜನಗಣತಿ ಜತೆಗೆ ಜಾತಿಗಣತಿ; ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸುವೆ ಎಂದ ಸಿದ್ದರಾಮಯ್ಯ

Caste census: 1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ. 50ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ, ಇದಕ್ಕೆ ವೈಜ್ಞಾನಿಕ ಕಾರಣ ಇರಲಿಲ್ಲ. ಹೀಗಾಗಿ ಶೇ. 50 ಮೀಸಲಾತಿ ಮಿತಿಯನ್ನು ತೆಗೆದುಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಜಾತಿಗಣತಿ; ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸುವೆ ಎಂದ ಸಿದ್ದರಾಮಯ್ಯ

Profile Prabhakara R May 1, 2025 5:05 PM

ಬೆಂಗಳೂರು: ಕೇಂದ್ರ ಸರ್ಕಾರ ಜನಗಣತಿ ಜತೆಗೆ ಜಾತಿ ಗಣತಿ (Caste census) ಮಾಡುವ ನಿರ್ಧಾರ ಕೈಗೊಂಡಿರುವುದನ್ನು ಸ್ವಾಗತಿಸುತ್ತೇನೆ. ಈ ಸಂದರ್ಭದಲ್ಲಿ ಸಂಸದ ರಾಹುಲ್ ಗಾಂಧಿ ಹಾಗೂ ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ. ಪ್ರಧಾನಿ ಮೋದಿ ಅವರಿಗಿಂತ ಹೆಚ್ಚಾಗಿ ರಾಹುಲ್ ಗಾಂಧಿಯವರನ್ನು ಅಭಿನಂದಿಸುತ್ತೇನೆ. ಯಾಕೆಂದರೆ ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ಜಾತಿಗಣತಿ ಮಾಡಬೇಕು ಎಂದು ರಾಹುಲ್​ ಗಾಂಧಿ ಒತ್ತಡ ಹೇರುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ನಗರದ ಕಾವೇರಿ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.50 ಮೀಸಲಾತಿ ಮಿತಿಯನ್ನು ಕೇಂದ್ರ ಸರ್ಕಾರ ಸಡಿಲ ಮಾಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು. 1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ. 50ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ, ಇದಕ್ಕೆ ವೈಜ್ಞಾನಿಕ ಕಾರಣ ಇರಲಿಲ್ಲ. ಹೀಗಾಗಿ ಶೇ. 50 ಮೀಸಲಾತಿ ಮಿತಿಯನ್ನು ತೆಗೆದುಹಾಕಬೇಕು ಎಂದು ಹೇಳಿದರು.



ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಇದನ್ನೇ ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ರಾಹುಲ್‌ ಗಾಂಧಿಯವರು ಪದೇಪದೆ ಒತ್ತಡ ಹಾಕಿದ್ದರಿಂದ ಕೇಂದ್ರ ನಿರ್ಧಾರ ಕೈಗೊಂಡಿದೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಆತುರವಾಗಿ ನಿರ್ಧಾರ ಕೈಗೊಂಡಿದ್ದಾರೆ. ಕೇವಲ ಜನಗಣತಿ ಜತೆಗೆ ಜಾತಿಗಣತಿ ನಡೆಸಿದರೆ ಸಾಲದು, ಕೇಂದ್ರ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಲಿ ಎಂದು ಒತ್ತಾಯಿಸಿದರು.

2015ರಲ್ಲೇ 192 ಕೋಟಿ ರೂ.ಗಳನ್ನು ಖರ್ಚು ಮಾಡಿ, ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಸಮೀಕ್ಷೆ ನಡೆಸಿದ್ದೆವು. ಇದಕ್ಕಾಗಿ 1.33 ಲಕ್ಷ ಶಿಕ್ಷಕರು ಕೆಲಸ ಮಾಡಿದ್ದಾರೆ. ಜಾತಿಗಣತಿ ವರದಿಯನ್ನು ಸ್ವೀಕರಿಸಿ ಸಂಪುಟದಲ್ಲಿ ಮಂಡಿಸಲಾಗಿದೆ. ಸಚಿವರ ಅಭಿಪ್ರಾಯವನ್ನು ಪಡೆದು ಮುಂದೆ ನಿರ್ಧಾರ ಕೈಗೊಳ್ಳುತ್ತೇವೆ. ಬಿಜೆಪಿಯವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು. ಎಲ್ಲ ಆಯೋಗಗಳ ವರದಿಯನ್ನೂ ಬಿಜೆಪಿಯವರು ವಿರೋಧಿಸಿದ್ದಾರೆ. ಇತಿಹಾಸ ನೋಡಿದರೆ ಎಂದೂ ಸಾಮಾಜಿಕ ನ್ಯಾಯದ ಪರವಾಗಿ ಬಿಜೆಪಿಯವರು ಇಲ್ಲ ಎಂದು ವಾಗ್ದಾಳಿ ನಡೆಸಿದರು.

ನಿರ್ದಿಷ್ಟ ಸಮಯದೊಳಗೆ ಕೇಂದ್ರ ಸರ್ಕಾರ ಜಾತಿಗಣತಿ ಮುಗಿಸಲಿ. ಕೇಂದ್ರ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಿ. ತಮಿಳುನಾಡಿನಲ್ಲಿ ಶೇ.63 ರಷ್ಟು ಮೀಸಲಾತಿ ಇದೆ, ಜಾರ್ಖಂಡ್​ನಲ್ಲಿ ಶೇ. 77 ರಷ್ಟು ಮೀಸಲಾತಿ ಇದೆ. ಅನೇಕ ರಾಜ್ಯಗಳಲ್ಲಿ ಮೀಸಲಾತಿ 50% ಮೀರಿ ಹೋಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Caste Census: ಬಿಗ್‌ ಬ್ರೇಕಿಂಗ್‌! ದೇಶಾದ್ಯಂತ ಜಾತಿಗಣತಿ ನಡೆಸಲು ಮೋದಿ ಸರ್ಕಾರ ನಿರ್ಧಾರ



ಹೀಗಾಗಿ, ಜನಸಂಖ್ಯೆಗೆ ಅನುಗುಣವಾಗಿ ಬಡತನ ಸಾಮಾಜಿಕ ಪರಿಸ್ಥಿತಿ‌ ನೋಡಬೇಕು, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರು ಮೀಸಲಾತಿಗೆ ಅರ್ಹರು. ಕೇಂದ್ರ ಸರ್ಕಾರ ಇದನ್ನು ಆರ್ಥಿಕವಾಗಿ ಹಿಂದುಳಿದವರು ಅಂತ ಹೇಳಬೇಕು. ಜಾತಿಗಣತಿ ಸರ್ವೆ ಆಗಲೇಬೇಕು, ಇದು ಕಾಂಗ್ರೆಸ್‌ ಪಕ್ಷ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ನಿಲುವಾಗಿದೆ ಎಂದರು.