ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಸಮರಕ್ಕೆ ಇಳಿದ ತಮಿಳುನಾಡು ಸಿಎಂ ವಿಜಯ್
ಕಾವೇರಿ ನದಿ ನೀರಿಗಾಗಿ ಈಗ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನವಿದ್ದು, ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದರೂ ಕರ್ನಾಟಕ ನೀರು ಬಿಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಸಂಗ್ರಹ ಚಿತ್ರ -
ಚೆನ್ನೈ: ತಮಿಳುನಾಡು (Tamil nadu) ಮುಖ್ಯಮಂತ್ರಿ ಜೋಸೆಫ್ ವಿಜಯ್ (Chief Minister Joseph Vijay) ಅವರು ಕರ್ನಾಟಕದ (Karnataka) ವಿರುದ್ಧ ಇದೀಗ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management Authority) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ (Cauvery Water Regulation Committee) ನಿರ್ದೇಶನವಿದ್ದರೂ ಕರ್ನಾಟಕವು ತಮಿಳುನಾಡು ಪಾಲಿನ ಕಾವೇರಿ ನೀರನ್ನು ಬಿಡುಗಡೆ ಮಾಡಲು ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರವು ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕರ್ನಾಟಕದ ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದು, ಕಡ್ಡಾಯವಾಗಿ ನಿಗದಿತ ಪ್ರಮಾಣದ ನೀರನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಅಧಿಕಾರಿಗಳು ಪದೇ ಪದೇ ನಿರ್ದೇಶನವನ್ನು ನೀಡುತ್ತಿದ್ದರೂ ಕರ್ನಾಟಕವು ಅಗತ್ಯ ಪ್ರಮಾಣದ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಸೂಚನೆಯ ಮೇರೆಗೆ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಕಾಂಗ್ರೆಸ್ ನಾಯಕ ನಾನಾ ಪಟೋಲೆ ಪಾದಪೂಜೆ ಮಾಡಿದ ಕಾರ್ಯಕರ್ತರು: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ; ವಿಡಿಯೊ ವೈರಲ್
ಜುಲೈ 28ರಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ 139ನೇ ಸಭೆಯಲ್ಲಿ ಆಗಸ್ಟ್ 12ರವರೆಗೆ ಬಿಳಿಗುಂಡ್ಲುವಿನಲ್ಲಿ ಸೆಕೆಂಡಿಗೆ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕೃಷ್ಣರಾಜ ಸಾಗರ ಮತ್ತು ಕಬಿನಿ ಜಲಾಶಯಗಳಿಂದ ಈ ನೀರನ್ನು ಬಿಡುಗಡೆ ಮಾಡಲು ಸೂಚಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದ ಜಲವಿಜ್ಞಾನ ಮತ್ತು ಹವಾಮಾನ ಪರಿಸ್ಥಿತಿಗಳನ್ನು ಪರಿಶೀಲಿಸಿಯೇ ಈ ನಿರ್ದೇಶನಗಳನ್ನು ನೀಡಲಾಗಿದೆ. ಇದರ ಬಳಿಕ ಮತ್ತೆ ಜುಲೈ 30 ರಂದು ನಡೆದ 54 ನೇ ತುರ್ತು ಸಭೆಯಲ್ಲಿ ಈ ಬಗ್ಗೆ ಕರ್ನಾಟಕಕ್ಕೆ ಮತ್ತೆ ನಿರ್ದೇಶನ ನೀಡಲಾಗಿದೆ.
Cauvery row:
— News Arena India (@NewsArenaIndia) August 3, 2026
TN govt moves SC seeking proportionate water release from Karnataka following CM Vijay's orders pic.twitter.com/sizHtxNmdZ
ತಮಿಳುನಾಡು ಸರ್ಕಾರದ ಅಂಕಿಅಂಶಗಳ ಪ್ರಕಾರ ಜುಲೈ 29 ಮತ್ತು ಆಗಸ್ಟ್ 2ರ ನಡುವೆ ಬಿಳಿಗುಂಡ್ಲುವಿನಲ್ಲಿ ದಾಖಲಾದ ಒಳಹರಿವು ಕೇವಲ 158 ರಿಂದ 550 ಕ್ಯೂಸೆಕ್‌ಗಳು. ಕರ್ನಾಟಕ ಕಡ್ಡಾಯವಾಗಿ 3,500 ಕ್ಯೂಸೆಕ್ ನೀರು ಹರಿಸಬೇಕಿತ್ತು.
ಕರ್ನಾಟಕದ ಜಲಾಶಯಗಳಲ್ಲಿ ಸಾಕಷ್ಟು ನೀರು ಇದೆ. ಆಗಸ್ಟ್ 3ರ ವೇಳೆಗೆ ಕೃಷ್ಣರಾಜ ಸಾಗರ ಜಲಾಶಯದಲ್ಲಿ 23.078 ಟಿಎಂಸಿ, ಕಬಿನಿಯಲ್ಲಿ 18.610 ಟಿಎಂಸಿ, ಹಾರಂಗಿಯಲ್ಲಿ 7.827 ಟಿಎಂಸಿ ಮತ್ತು ಹೇಮಾವತಿಯಲ್ಲಿ 28.022 ಟಿಎಂಸಿ ನೀರನ್ನು ಹೊಂದಿದೆ. ನಾಲ್ಕು ಜಲಾಶಯಗಳಲ್ಲಿನ ಒಟ್ಟು ಸಂಗ್ರಹವು 77.537 ಟಿಎಂಸಿ ಆಗಿದ್ದು, ಇದರಲ್ಲಿ 67.517 ಟಿಎಂಸಿ ಬಳಸಬಹುದಾದ ನೀರು ಸೇರಿದೆ. ಇದರಲ್ಲಿ ಕರ್ನಾಟಕವು ತಮಿಳುನಾಡಿನ ಹಕ್ಕಿನ ಪಾಲಿನ ನೀರನ್ನು ಬಿಡುಗಡೆ ಮಾಡಲು ಯಾವುದೇ ತೊಂದರೆ ಇಲ್ಲ. ಇನ್ನು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ, ಇದರಿಂದ ಒಳಹರಿವು ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ತಮಿಳುನಾಡು ಸರ್ಕಾರ ವಾದಿಸಿದೆ.
ಅಜಿತ್ ದೋವಲ್ ಮುಡಿಗೆ ಮತ್ತೊಂದು ಗರಿ; ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರದಾನ
ಬಿಳಿಗುಂಡ್ಲುವಿನಿಂದ ತಮಿಳುನಾಡಿಗೆ 26.954 ಟಿಎಂಸಿ ನೀರು ಹರಿಯಬೇಕಿತ್ತು. ಆದರೆ ಈ ಪ್ರಮಾಣದ ನೀರನ್ನು ಕರ್ನಾಟಕ ಬಿಡುಗಡೆ ಮಾಡಿಲ್ಲ. ಕರ್ನಾಟಕವು ಕಾವೇರಿ ಅಧಿಕಾರಿಗಳ ಆದೇಶಗಳನ್ನು ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ನಿಗದಿತ ಸಮಯದೊಳಗೆ ತಮಿಳುನಾಡಿಗೆ ಸೂಕ್ತ ಪ್ರಮಾಣದ ಕಾವೇರಿ ನೀರು ಸಿಗುವಂತೆ ಮಾಡಲು ತಮಿಳುನಾಡು ಹಿರಿಯ ಕಾನೂನು ಸಲಹೆಗಾರರ ಸಲಹೆಯ ಮೇರೆಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ತಿಳಿಸಿದೆ.