ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನ ತೆಲಂಗಾಣಕ್ಕೆ ಸಾಗಿಸಿದ ಕಾಂಗ್ರೆಸ್‌; ಏನಿದು ಗಂಭೀರ ಆರೋಪ?

BY Vijayendra: 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನೂ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿ ದುರ್ಬಳಕೆ ಮಾಡಿದ್ದು ರಾಜ್ಯದ ಜನರ ಮುಂದಿದೆ. ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವಿದ್ದು, ಇವರ ವೈಫಲ್ಯ ಮುಚ್ಚಿಹಾಕಲು ಕೇಂದ್ರ ಸರ್ಕಾರ ದೂರುವ ಕೆಲಸ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ: ಬಿ.ವೈ. ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದರು. -

Profile
Siddalinga Swamy Jun 11, 2026 6:39 PM

ಬೆಂಗಳೂರು, ಜೂ. 11: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯ ಮುಚ್ಚಿ ಹಾಕುವ ಸಲುವಾಗಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ, ಅನ್ಯಾಯ ಮಾಡುತ್ತ ಇದೆ ಎಂದು ಪದೇ ಪದೆ ಪ್ರಸ್ತಾಪಿಸುತ್ತದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ವಾಸ್ತವಿಕ ಸತ್ಯ ಏನೆಂದರೆ, 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನೂ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿ ದುರ್ಬಳಕೆ ಮಾಡಿದ್ದು ರಾಜ್ಯದ ಜನರ ಮುಂದಿದೆ. ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವಿದ್ದು, ಇವರ ವೈಫಲ್ಯ ಮುಚ್ಚಿಹಾಕಲು ಕೇಂದ್ರ ಸರ್ಕಾರ ದೂರುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಪ್ರಶ್ನೆಗೆ ಉತ್ತರಿಸಿ, ನಳ್ಳಿಗಳಲ್ಲಿ ನೀರು ಬರಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದು ಎಂದರು. ರಾಜ್ಯ ಸರ್ಕಾರಕ್ಕೆ ಜಲಜೀವನ್ ಯೋಜನೆಯಡಿ ಅನುದಾನ ನೀಡಲಾಗುತ್ತದೆ. ಆ ಹಣದ ಸದುಪಯೋಗ ಮಾಡಿ, ಸುರಕ್ಷಿತ, ಶುದ್ಧವಾದ ಕುಡಿಯುವ ನೀರನ್ನು ಪ್ರತಿ ಮನೆಗೂ ಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ತಿಳಿಸಿದರು.

ಸಮರ್ಪಕ ನೀರಿನ ಮೂಲವನ್ನು ಗುರುತಿಸದೇ ಇರುವುದು ರಾಜ್ಯ ಸರ್ಕಾರದ ವೈಫಲ್ಯ. ಕೆರೆ, ಹೊಳೆ, ಹಳ್ಳ, ಡ್ಯಾಂಗಳಿಂದ ಕೊಡುವ ಕೆಲಸ ಮಾಡಿದರೆ ಅದು ಖಾಯಂ ಆಗಿರುತ್ತದೆ. ಕೇಂದ್ರ ಸರ್ಕಾರದ ಹಣವನ್ನು ಬಳಸಿ ಸಮರ್ಪಕವಾಗಿ ಅನುಷ್ಠಾನ ಮಾಡುವುದು ರಾಜ್ಯ ಸರ್ಕಾರದ ಕೆಲಸ. ಇದು ಒಕ್ಕೂಟ ವ್ಯವಸ್ಥೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.‌

12 ವರ್ಷಗಳ ಆಡಳಿತ; ಪ್ರಧಾನಿ ಮೋದಿ ಅಭಿನಂದಿಸಿದ ಎಚ್.ಡಿ. ಕುಮಾರಸ್ವಾಮಿ

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಮತ್ತಿತರರು ಉಪಸ್ಥಿತರಿದ್ದರು.