ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MLA Raju Kage: ಎರಡು ದಿನದಲ್ಲಿ ರಾಜೀನಾಮೆ! ಶಾಸಕ ರಾಜು ಕಾಗೆ ಸ್ಫೋಟಕ ಹೇಳಿಕೆ

MLA Raju Kage: ಶಾಸಕ ಬಿ.ಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ ಆರ್ ಪಾಟೀಲ್ ಹೇಳಿದ್ದು ಸುಳ್ಳಲ್ಲ. ಅವರು ನಿಜಾನೇ ಹೇಳಿದ್ದಾರೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಕೊಟ್ಟರೂ ಇನ್ನೂ ಆರ್ಡರ್ ಬಂದಿಲ್ಲ. ರಾಜ್ಯದ ಎಲ್ಲಾ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ ಎಂದಿದ್ದಾರೆ.

ಎರಡು ದಿನದಲ್ಲಿ ರಾಜೀನಾಮೆ! ಶಾಸಕ ರಾಜು ಕಾಗೆ ಸ್ಫೋಟಕ ಹೇಳಿಕೆ

ಶಾಸಕ ರಾಜು ಕಾಗೆ

ಹರೀಶ್‌ ಕೇರ ಹರೀಶ್‌ ಕೇರ Jun 23, 2025 1:15 PM

ಬೆಳಗಾವಿ : ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾಗಿ ನಾನು ರಾಜೀನಾಮೆ (Resignation) ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಆಡಳಿತ ಪಕ್ಷದ ಶಾಸಕ ರಾಜು ಕಾಗೆ (MLA Raju Kage) ಅಸಮಾಧಾನ ಹೊರಹಾಕಿದ್ದಾರೆ. ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದು, ರಾಜು ಕಾಗೆ ಅವರಲ್ಲಿ ಒಬ್ಬರಾಗಿದ್ದಾರೆ.

ರಾಜ್ಯದ ಇಂತಹ ಆಡಳಿತ ವ್ಯವಸ್ಥೆಯಿಂದ ನನಗೆ ತುಂಬಾ ನೋವಾಗಿದೆ. ಎರಡು ದಿನದಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರೂ ಯಾವುದೇ ಆಶ್ಚರ್ಯವಿಲ್ಲ ಎಂದು ಕಾಗವಾಡ ಶಾಸಕ ರಾಜು ಕಾಗೆ ರಾಜ್ಯ ಸರಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಶಾಸಕ ಬಿ.ಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ ಆರ್ ಪಾಟೀಲ್ ಹೇಳಿದ್ದು ಸುಳ್ಳಲ್ಲ. ಅವರು ನಿಜಾನೇ ಹೇಳಿದ್ದಾರೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಕೊಟ್ಟರೂ ಇನ್ನೂ ಆರ್ಡರ್ ಬಂದಿಲ್ಲ. ರಾಜ್ಯದ ಎಲ್ಲಾ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ನನಗೆ ಇದರಿಂದ ತುಂಬಾ ಮನಸ್ಸಿಗೆ ನೋವಾಗಿದೆ. ನಾನು ಎರಡು ದಿನದಲ್ಲಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Raju Kage: ಕಾಗವಾಡ ಶಾಸಕ ರಾಜು ಕಾಗೆ ಪುತ್ರಿ ನಿಧನ