Corona Virus: ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ
ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಕರೋನಾ ಪರೀಕ್ಷೆಗೆ ಒಳಪಡಿಸಿದ್ದು, 9 ಹೊಸ ಪ್ರಕರಣ ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.8.65 ನಷ್ಟಿದೆ. ಕೇರಳ ಮತ್ತು ಆಂಧ್ರಪ್ರದೇಶದಲ್ಲೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿವೆ. ರಾಜ್ಯದಲ್ಲಿ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.


ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ (covid 19) ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ (Karnataka)ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು (Health department) ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ 104 ಮಂದಿಯನ್ನು ಕರೋನಾ ಪರೀಕ್ಷೆಗೆ ಒಳಪಡಿಸಿದ್ದು, 9 ಹೊಸ ಪ್ರಕರಣ ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.8.65 ನಷ್ಟಿದೆ. ಕೇರಳ ಮತ್ತು ಆಂಧ್ರಪ್ರದೇಶದಲ್ಲೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿವೆ. ರಾಜ್ಯದಲ್ಲಿ ಯಾವುದೇ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಕಡ್ಡಾಯ ಕೋವಿಡ್ ಟೆಸ್ಟ್
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಮತ್ತೆ ಸದ್ದು ಮಾಡುತ್ತಿರುವುದರಿಂದ ಉಸಿರಾಟದ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಕೋವಿಡ್ -19 ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ.
RT-PCR ಮತ್ತು RAT ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಿಗೆ ಕೋವಿಡ್ ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್ಗಳನ್ನು FIFO (First In First Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.
ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು.
ಇದನ್ನೂ ಓದಿ: Covid-19 Test: ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲು ಆರೋಗ್ಯ ಇಲಾಖೆ ಸೂಚನೆ