ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧವೇ ಶವ ಹೂತ ಆರೋಪ, ಎಸ್‌ಐಟಿಗೆ ದೂರು!

Mahesh Shetty Timarodi: 2018ರಲ್ಲಿ ಉಜಿರೆಯ ಬಿಲ್ಲರೋಡಿ ಎಂಬಲ್ಲಿ ಅಕ್ರಮವಾಗಿ ಶವ ಹೂತಿರುವ ಕುರಿತು ದೂರು ಸಲ್ಲಿಕೆಯಾಗಿದೆ. ಸೋಂಪ ಯಾನೆ ಬಾಲಕೃಷ್ಣ ಗೌಡ ಎಂಬ ವ್ಯಕ್ತಿಯ ಶವವನ್ನು ಜೇಸಿಬಿ ಯಂತ್ರದ ಮೂಲಕ ಮಣ್ಣಿನಡಿ ಹೂತಿರುವ ಅನುಮಾನ ವ್ಯಕ್ತವಾಗಿದ್ದು, ಇದರ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಕೈವಾಡವಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧವೇ ಶವ ಹೂತ ಆರೋಪ, ಎಸ್‌ಐಟಿಗೆ ದೂರು!

Prabhakara R Prabhakara R Aug 20, 2025 11:04 PM

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarodi) ವಿರುದ್ಧವೇ ಅಕ್ರಮವಾಗಿ ಶವ ಹೂತ ಆರೋಪ ಕೇಳಿಬಂದಿದೆ. ಭಾಸ್ಕರ್ ನಾಯ್ಕ್ ಎಂಬುವವರು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

2018ರಲ್ಲಿ ಉಜಿರೆಯ ಬಿಲ್ಲರೋಡಿ ಎಂಬಲ್ಲಿ ಅಕ್ರಮವಾಗಿ ಶವ ಹೂತಿರುವ ಕುರಿತು ದೂರು ಸಲ್ಲಿಕೆಯಾಗಿದೆ. ಸೋಂಪ ಯಾನೆ ಬಾಲಕೃಷ್ಣ ಗೌಡ ಎಂಬ ವ್ಯಕ್ತಿಯ ಶವವನ್ನು ಜೇಸಿಬಿ ಯಂತ್ರದ ಮೂಲಕ ಮಣ್ಣಿನಡಿ ಹೂತಿರುವ ಅನುಮಾನ ವ್ಯಕ್ತವಾಗಿದ್ದು, ಇದರ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಕೈವಾಡವಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರುದಾರ ಭಾಸ್ಕರ್ ನಾಯ್ಕ್ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದ ಸೂಕ್ತ ಸಾಕ್ಷ್ಯಗಳನ್ನು ನಾನು ತನಿಖಾ ಸಮಯದಲ್ಲಿ ಎಸ್ಐಟಿಗೆ ಒದಗಿಸುತ್ತೇನೆ. ಘಟನೆಯ ಸಮಯದಲ್ಲಿ ನಡೆದಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಸಾಕ್ಷ್ಯಾಧಾರಗಳಿವೆ ಎಂದು ತಿಳಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಅವರು ಸರ್ಕಾರಿ ಜಾಗದಲ್ಲಿ ಮರಗಳನ್ನು ಕಡಿದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಮಣ್ಣಿನಡಿಗೆ ಹಾಕಿ ಹೂತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಯನ್ನು ಸ್ಥಳೀಯರೂ ನೋಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಲ್ಲರೋಡಿ ಎಂಬ ಪ್ರದೇಶದಲ್ಲಿ ಉತ್ಖನನ ನಡೆಸಿದರೆ ಶವ ಹೊರ ಬರುವ ಸಾಧ್ಯತೆ ಇದೆ. ಆದ್ದರಿಂದ ತಕ್ಷಣ ಕ್ರಮ ಕೈಗೊಂಡು ಸತ್ಯಾಂಶ ಬಹಿರಂಗಪಡಿಸಬೇಕು ಎಂದು ದೂರುದಾರರು, ಎಸ್ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.