ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Dakshina Kannada: ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ: 8 ಮಂದಿಗೆ ತೀವ್ರ ಗಾಯ

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ: 8 ಮಂದಿಗೆ ತೀವ್ರ ಗಾಯ

ಕಾಲು ಸಂಕ ಕುಸಿತ -

ಹರೀಶ್‌ ಕೇರ
ಹರೀಶ್‌ ಕೇರ Apr 25, 2026 2:46 PM

ಮಂಗಳೂರು, ಏ.25: ದೈವದ ಭಂಡಾರ (Daiva Bhandara) ಮೆರವಣಿಗೆ ವೇಳೆ ಕಾಲು ಸಂಕ (Foot Bridge) ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಡಬಿದ್ರೆ (Moodbidri) ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಂಬು, ಕಹಳೆ, ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿತ್ತು. ಕಾಲು ಸಂಕದ ಮೇಲೆ ಬಂದಾಗ ಏಕಾಏಕಿ ಮುರಿದು ಬಿದ್ದಿದೆ. ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಕಾಲು ಸಂಕ ಮುರಿದು ಕಲ್ಲಿನ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ ತೀವ್ರ ಗಾಯಗಳೇ ಆಗಿವೆ. ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ.

Heart Attack: ಶಾಸಕ ಲಕ್ಷ್ಮಣ ಸವದಿ ಕಣ್ಣೆದುರೇ ಆಪ್ತ ಹೃದಯಾಘಾತದಿಂದ ಸಾವು

ಜಾಮೀನು ಸಿಗದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯೊಬ್ಬ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಜೈಲಿನ ಶೌಚಾಲಯದ ಕೆಟ್ಟಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಕೈದಿ ಮಹಾಂತೇಶ್ (29) ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಗದಗ ಮೂಲದ ಮಹಾಂತೇಶ್ ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ. ಗದಗದಿಂದ ಧಾರವಾಡಕ್ಕೆ ಮಹಾಂತೇಶ ಕುಂಬಾರ ಶಿಫ್ಟ್ ಆಗಿದ್ದ. ನಿನ್ನೆ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹಾಗಾಗಿ ಮಹಾಂತೇಶ್ ಕುಂಬಾರ್ ಮಾನಸಿಕವಾಗಿ ನೊಂದಿದ್ದ. ಜೈಲಿನಲ್ಲಿ ಮಹಾಂತೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.