ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Digital Arrest: ಡಿಜಿಟಲ್ ಅರೆಸ್ಟ್ ಪ್ರಕರಣ; ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಅ. 23ರಂದು ಬಿಜೈ ನಿವಾಸಿ 79ರ ಹರೆಯದ ಮಹಿಳೆಗೆ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿ ವಾಟ್ಸಾಪ್ ಕರೆ ಮಾಡಿ ಮಹಿಳೆಯ ಮೇಲೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ ಎಂದು ಬಂಧನದ ಬೆದರಿಕೆಯೊಡ್ಡಿದ್ದ.

ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

-

Vishakha Bhat Vishakha Bhat Nov 1, 2025 10:49 AM

ಉಡುಪಿ: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, (Digital Arrest) ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಶ್ಲಾಘಿಸಿದ್ದಾರೆ.

ಡಿಸಿಪಿಗಳಾದ ಮಿಥುನ್‌ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯ ನಿಜಕ್ಕೂ ಶ್ಲಾಘನೀಯ, ಇಂಥ ಕಾರ್ಯಚರಣೆ ಗಳಿಂದ ಸಾರ್ವಜನಿಕರಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ ಪೊಲೀಸ್ ಇಲಾಖೆ ಮೇಲೆ ಮತ್ತಷ್ಟು ವಿಶ್ವಾಸ ಹೆಚ್ಚುತ್ತದೆ. ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ವಂಚನೆಗಳಿಂದ ನಾಗರಿಕರು ದೂರ ಉಳಿಯಬೇಕು, ಪೊಲೀಸರಿಗೆ ಸಹಕರಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮನವಿ ಮಾಡಿದ್ದಾರೆ.

ಏನಿದು ಪ್ರಕರಣ?

ಅ. 23ರಂದು ಬಿಜೈ ನಿವಾಸಿ 79ರ ಹರೆಯದ ಮಹಿಳೆಗೆ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿ ವಾಟ್ಸಾಪ್ ಕರೆ ಮಾಡಿ ಮಹಿಳೆಯ ಮೇಲೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ ಎಂದು ಬಂಧನದ ಬೆದರಿಕೆಯೊಡ್ಡಿದ್ದ. ಬಂಧನದಿಂದ ಪಾರಾಗಲು ಸಂತ್ರಸ್ತೆ ಹಣವನ್ನು ಠೇವಣಿ ಮಾಡುವಂತೆ ಹಾಗೂ ಪರಿಶೀಲನೆ ಬಳಿಕ ಹಣವನ್ನು ವರ್ಗಾಯಿಸುವುದಾಗಿ ತಿಳಿಸಿದ್ದಲ್ಲದೆ, ಈ ವಿಷಯ ಯಾರಿಗೂ ತಿಳಿಸದಂತೆ ಭಯ ಹುಟ್ಟಿಸಿ ಸುಮಾರು 5 ಗಂಟೆಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿ ಮಹಿಳೆಯನ್ನು ಇರಿಸಿದ್ದ ಎಂದು ತಿಳಿದು ಬಂದಿದೆ. ಅದೇ ದಿನ ಸಂಜೆ ಸುಮಾರು 6 ಗಂಟೆಯ ವೇಳೆಗೆ ತಮ್ಮ ಫ್ಲ್ಯಾಟ್‌ನ ಮಹಿಳೆ ಜತೆ ವಿಚಾರ ತಿಳಿಸಿದಾಗ, ಆಕೆ ಸಂತ್ರಸ್ತೆ ಮಹಿಳೆಯ ಜತೆಗೆ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.

ತಕ್ಷಣ ಠಾಣಾ ಠಾಣಾಧಿಕಾರಿ 1930 ಸಹಾಯವಾಣಿ ಮೂಲಕ ಬ್ಯಾಂಕ್ ಖಾತೆಯಲ್ಲಿದ್ದ 17 ಲಕ್ಷ ರೂ.ಗಳನ್ನು ಬ್ಲಾಕ್ ಮಾಡಿಸಿ ಬ್ಯಾಂಕ್ ಮ್ಯಾನೇಜರ್‌ಗೆ ಕರೆ ಮಾಡಿ ಹಣ ಇರುವ ಬಗ್ಗೆ ದೃಢಪಡಿಸಿದ್ದಾರೆ. ಅ. 24ರಂದು ಹಣ ಬಿಡುಗಡೆಗೆ ಮಾಹಿತಿಯೊಂದಿಗೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದ್ದು, ಬಳಿಕ ಎರಡು ದಿನ ಸಾರ್ವತ್ರಿಕ ರಜೆ ಇದ್ದ ಕಾರಣ ಅ. 27ರಂದು ನ್ಯಾಯಾಲಯ ಹಣ ಬಿಡುಗಡೆಗೆ ಆದೇಶ ನೀಡಲಾಗಿದೆ.

ಈ ಸುದ್ದಿಯನ್ನೂ ಓದಿ: Cyber Crime: ಡಿಜಿಟಲ್‌ ಅರೆಸ್ಟ್‌ ಪ್ರಕರಣದಲ್ಲಿ ಮೊದಲ ಬಾರಿಗೆ ಶಿಕ್ಷೆ ಪ್ರಕಟ; 9 ಕಿಡಿಗೇಡಿಗಳಿಗೆ ಸಜೆ

ಮಂಗಳೂರು ನಗರ ವ್ಯಾಪ್ತಿಯಲ್ಲಿ ಈ ವರ್ಷ 8 ಪ್ರಕರಣಗಳಲ್ಲಿ 8ಕೋಟಿ ರೂ.ಗಳನ್ನು ಸೈಬರ್ ಖದೀಮರು ದೋಚಿದ್ದಾರೆ. ಈವರೆಗೆ ಇದರಲ್ಲಿ 35.98 ಲಕ್ಷ ರೂ.ಗಳನ್ನು ವಶಪಡಿಸಲಾಗಿದೆ. ಡಿಜಿಟಲ್ ಅರೆಸ್ಟ್‌ ಹೆಸರಿನಲ್ಲಿ ಹಿರಿಯ ನಾಗರಿಕರು ಹೆಚ್ಚಾಗಿ ಬಲಿಪಶುಗಳಾಗುತ್ತಿದ್ದಾರೆ. ವಾಟ್ಸಾಪ್ ಕರೆಗಳ ಮೂಲಕ ಅಪರಿಚಿತ ವ್ಯಕ್ತಿಗಳು ಕರೆ ಆನ್‌ಲೈನ್ ಮೂಲಕ ಹಣ ವರ್ಗಾವಣೆ ಒತ್ತಾಯಿಸಿದಾಗ ವಿಚಲಿತರಾಗದೆ ಭಯಗೊಳ್ಳದೆ ಕರೆ ಕಟ್ ಮಾಡಿ ತಕ್ಷಣ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದವರು ಹೇಳಿದರು.