ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karkala News: ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ಗೆ ಪಿತೃವಿಯೋಗ

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘ ಚಾಲಕರಾಗಿದ್ದರು. ವಾಸುದೇವ ಅವರಿಗೆ 87 ವರ್ಷ ವಯಸ್ಸಾಗಿತ್ತು. ಪ್ರಖರ ವಾಗ್ಮಿಯಾಗಿದ್ದ ವಾಸುದೇವ್, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ಗೆ ಪಿತೃವಿಯೋಗ

ಎಂ. ಕೆ. ವಾಸುದೇವ

ಹರೀಶ್‌ ಕೇರ ಹರೀಶ್‌ ಕೇರ Jul 17, 2025 10:27 AM

ಉಡುಪಿ: ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ (Sunil Kumar) ಅವರ ತಂದೆ, ಆರ್‌ಎಸ್‌ಎಸ್‌ನ (RSS) ಹಿರಿಯ ಮುಖಂಡ, ನಿವೃತ್ತ ಪ್ರಾಂಶುಪಾಲ ಎಂ. ಕೆ. ವಾಸುದೇವ ಕೊನೆಯುಸಿರೆಳೆದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಣಿಪಾಲ ಕೆಎಂಸಿ ಮತ್ತು ಟಿಎಂಎ ಪೈ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಪ್ರಮೋದಾ, ಪುತ್ರ ಸುನಿಲ್‌ ಕುಮಾರ್‌, ಸೊಸೆ ಪ್ರಿಯಾಂಕಾ, ಪುತ್ರಿ ಸುಕನ್ಯಾ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘ ಚಾಲಕರಾಗಿದ್ದರು. ವಾಸುದೇವ ಅವರಿಗೆ 87 ವರ್ಷ ವಯಸ್ಸಾಗಿತ್ತು. ಪ್ರಖರ ವಾಗ್ಮಿಯಾಗಿದ್ದ ವಾಸುದೇವ್, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಮೃತರ ಅಂತಿಮ ವಿಧಿ ವಿಧಾನ ಶಾಸಕರ ಮನೆ ಕಲಂಬಾಡಿ ಪದವಿನಲ್ಲಿ ಗುರುವಾರ ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: Sunil Ambekar: ಮಣಿಪುರದಲ್ಲಿ‌ ಶಾಂತಿ ಸ್ಥಾಪಿಸಲು ಆರ್‌ಎಸ್‌ಎಸ್‌ ಶ್ರಮಿಸುತ್ತಿದೆ ಎಂದ ಸುನೀಲ್‌ ಅಂಬೇಕರ್