ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Cabinet Meeting: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ

Tulu second official language: ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ನಡೆದಿದೆ. ತುಳು ಭಾಷೆಯನ್ನು (Tulu) ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮಾಡುವುದು, 'ದಕ್ಷಿಣ ಕನ್ನಡ' ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣ ಮಾಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಈ ಬಗ್ಗೆ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಯಾವೆಲ್ಲಾ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

ತುಳು ಭಾಷೆಗೆ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ

-

Prabhakara R
Prabhakara R Sep 18, 2026 4:24 PM

ಮಂಗಳೂರು: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ (Tulu second official language) ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ (Cabinet Meeting) ಅನುಮೋದನೆ ನೀಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ್ದಾರೆ.

ಮಂಗಳೂರು ನಗರದ ಪ್ರಜಾಸೌಧದಲ್ಲಿ ಇದೇ ಮೊದಲ ಬಾರಿ ಸಿಎಂ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯಿಸುವಂತೆ ತುಳು ಭಾಷೆಗೆ 2ನೇ ಹೆಚ್ಚುವರಿ ಭಾಷೆಯಾಗಿ ಮಾನ್ಯತೆ ನೀಡಲು ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಹಿಂದಿನ ಸರ್ಕಾರ ಯಾಕೆ ನಿರ್ಧಾರ ಮಾಡಲಿಲ್ಲ ಎಂದು ನಾನು ಪ್ರಶ್ನಿಸಲ್ಲ. ಆದರೆ, ನಮಗೆ ಒಂದು ಬದ್ಧತೆ ಇದೆ. ನಮ್ಮ ಸರ್ಕಾರದ ಚಿಂತನೆ ಏನೆಂದರೆ, ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಆ ದೃಷ್ಟಿಯಿಂದ ಎಲ್ಲ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಅವಕಾಶ ನೀಡಲಾಗುತ್ತದೆ. ಒಂದು ತಿಂಗಳಲ್ಲಿ ಇದಕ್ಕಾಗಿ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಕರಾವಳಿಗಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Cess on Cinema Tickets: ರಾಜ್ಯದ ಸಿನಿಮಾ ಪ್ರಿಯರಿಗೆ ಬೆಲೆ ಏರಿಕೆ ಶಾಕ್; ಟಿಕೆಟ್‌ ಮೇಲೆ ಶೇ. 2 ಸೆಸ್‌ ವಿಧಿಸಿದ ಸರ್ಕಾರ!

32,611 ಕೋಟಿ ವೆಚ್ಚದ ಯೋಜನೆಗಳಿಗೆ ಅನುಮೋದನೆ

ಸುಮಾರು 32,611 ಕೋಟಿ ವೆಚ್ಚದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ ಸುಮಾರು 16,000 ಕೋಟಿ ರೂ.ಗಳನ್ನು ಗ್ರಾಮೀಣಾಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದ 16,000 ಕೋಟ ರೂ.ಗಳನ್ನು ಮಂಗಳೂರು, ಉಡುಪಿ ಸೇರಿ ಕರಾವಳಿ ಭಾಗಕ್ಕೆ ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.