ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kukke Subrahmanya Temple: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಧರ್ಮೀಯರಿಗೆ ಆಹ್ವಾನಕ್ಕೆ ವಿರೋಧ

Kukke Subrahmanya Temple: ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರಿಗೆ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಆಹ್ವಾನ ನೀಡೋದು ಖಂಡನೀಯ ಎಂದು ಆಕ್ರೋಶ ಕೇಳಿಬಂದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ, ಅನ್ಯಮತೀಯರಿಗೆ ಆಮಂತ್ರಣಕ್ಕೆ ವಿರೋಧ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ -

ಹರೀಶ್‌ ಕೇರ
ಹರೀಶ್‌ ಕೇರ Dec 22, 2025 9:30 AM

ಮಂಗಳೂರು, ಡಿ.22: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke subrahmanya temple) ಇಂದಿನಿಂದ ಕಿರುಷಷ್ಠಿ (Kiru Shashti) ಮಹೋತ್ಸವ ವಿಜ್ರಂಭಣೆಯಿಂದ ನಡೆಯುತ್ತಿದೆ. ಆದರೆ, ಈ ಮಹೋತ್ಸವಕ್ಕೆ ಸ್ಪೀಕರ್‌ ಯುಟಿ ಖಾದರ್‌ (Speaker UT Khadar) ಸೇರಿದಂತೆ ಅನ್ಯಧರ್ಮೀಯ ನಾಯಕರನ್ನು ಆಹ್ವಾನಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ಷೇತ್ರ ಸಂರಕ್ಷಣಾ ವೇದಿಕೆಯು ಇದನ್ನು ವಿರೋಧಿಸಿ ಇಂದು ಪ್ರತಿಭಟನೆಗೆ ಮುಂದಾಗಿದ್ದು, ಅನ್ಯಧರ್ಮೀಯ ನಾಯಕರಿಗೆ ಕೊಟ್ಟಿರುವ ಆಹ್ವಾನಗಳನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆಗ್ರಹಿಸಿದೆ.

ಸ್ಪೀಕರ್ ಯು.ಟಿ. ಖಾದರ್, ಐವಾನ್ ಡಿಸೋಜ, ಬ್ಯಾ​ರಿ ಅಕಾಡೆಮಿ ಅಧ್ಯಕ್ಷ ಉಮರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿಯ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಜೋಕಿಮ್, ಮತ್ತು ಶಾರ್ಲೆಟ್ ಪಿಂಟೋ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಅನ್ಯಧರ್ಮೀಯರನ್ನು ಏಕೆ ಆಹ್ವಾನಿಸಬೇಕು ಎಂದು ಕ್ಷೇತ್ರ ಸಂರಕ್ಷಣಾ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ಇಂದಿನಿಂದ ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದವರಿಗೆ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಆಹ್ವಾನ ನೀಡೋದು ಖಂಡನೀಯ ಎಂದು ಕ್ಷೇತ್ರ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಚಿದಾನಂದ ಕಂದಡ್ಕ ಮತ್ತು ಸದಸ್ಯರಿಂದ ದೂರು ನೀಡಲಾಗಿದೆ. ತಕ್ಷಣ ಅದನ್ನ ತಡೆಯಬೇಕೆಂದು ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22 ರಂದು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ನಯನತಾರಾ ದಂಪತಿ, ಸರ್ಪಸಂಸ್ಕಾರದಲ್ಲಿ ಭಾಗಿ

ಕುಕ್ಕೆ ಕ್ಷೇತ್ರ ಮುಜರಾಯಿ ಇಲಾಖೆಯ ಅಧೀನದಲ್ಲಿರುವುದರಿಂದ ಸರ್ಕಾರದ ಶಿಷ್ಟಾಚಾರ ಪ್ರಕಾರ ಎಲ್ಲರನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಅನ್ಯಧರ್ಮಿಯರಾದ ಸ್ಪೀಕರ್ ಯು.ಟಿ.ಖಾದರ್, ಎಂಎಲ್‌ಸಿ ಐವನ್ ಡಿಸೋಜಾ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಜೋಕಿಂ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಪಿಂಟೋಗೆ ಆಹ್ವಾನ ನೀಡಲಾಗಿದೆ.