ಮಂಗಳೂರು MRPLನಲ್ಲಿ ಭಾರಿ ಸ್ಫೋಟ; ಓರ್ವ ಸಾವು, 9 ಮಂದಿಗೆ ಗಾಯ
Loud blast at MRPL: ಮಂಗಳೂರು ನಗರದ ಹೊರವಲಯದಲ್ಲಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಸಿಎಚ್‌ಟಿ ಘಟಕದಲ್ಲಿ ಬುಧವಾರ (ಸೆಪ್ಟೆಂಬರ್ 30) ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ಮೃತಪಟ್ಟಿರುವುದು ದೃಢವಾಗಿದ್ದು, 9 ಮಂದಿಗೆ ಗಾಯಾಗಿದೆ.
ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಕಾಣಿಸಿಕೊಂಡ ಬೆಂಕಿ -
ಮಂಗಳೂರು, ಸೆ. 30: ನಗರದ ಹೊರವಲಯದ ಸುರತ್ಕಲ್ ಬಳಿ ಇರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ ಸಿಎಚ್‌ಟಿ (ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್) ಘಟಕದಲ್ಲಿ ಬುಧವಾರ (ಸೆಪ್ಟೆಂಬರ್ 30) ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ಮೃತಪಟ್ಟಿರುವುದು ದೃಢವಾಗಿದ್ದು, 9 ಮಂದಿಗೆ ಗಾಯಾಗಿದೆ (Loud blast at MRPL). ಮೃತರನ್ನು ಮನೀಶ್ ಕರ್ಕರ (30) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಮಧ್ಯಾಹ್ನ ಸುಮಾರು 12:15ರ ವೇಳೆಗೆ ಸಿಎಚ್‌ಟಿ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ದಟ್ಟ ಬೆಂಕಿ ಹಾಗೂ ಹೊಗೆ ಇಡೀ ಸಂಕೀರ್ಣವನ್ನು ಆವರಿಸಿಕೊಂಡಿತು. ಕೂಡಲೇ ಅಗ್ನಿಶಾಮಕ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಸಂದರ್ಭದಲ್ಲಿ ಘಟಕದಲ್ಲಿದ್ದ ಮನೀಶ್ ಕರ್ಕರ ನಾಪತ್ತೆಯಾಗಿದ್ದರು. ಅಗ್ನಿಶಾಮಕ ದಳ ಮತ್ತು ಆಪತ್ತು ನಿರ್ವಹಣಾ ತಂಡಗಳು ನಡೆಸಿದ ಕಾರ್ಯಾಚರಣೆ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮನೀಶ್ ಅವರ ಮೃತದೇಹವನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಉಳಿದಂತೆ 9 ಮಂದಿ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಕಾಣಿಸಿಕೊಂಡ ಬೆಂಕಿ:
ಮಂಗಳೂರಿನ ಸುರತ್ಕಲ್ ಬಳಿ ಇರುವ ಎಂಆರ್‌ಪಿಎಲ್‌ನಲ್ಲಿ (MRPL) ದೊಡ್ಡ ಸದ್ದಿನೊಂದಿಗೆ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಆಕಾಶದ ತುಂಬಾ ದಟ್ಟ ಹೊಗೆ ಮತ್ತು ಬೆಂಕಿ ಆವರಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. pic.twitter.com/qkNvw5LfHc
— Shivaram Shetty (@Shivaramshett10) September 30, 2026
ರಾಜೇಶ್ ಬ್ಯಾಪ್ಟಿಸ್ಟ್ ಎಂಬವವರಿಗೆ ಶೇ. 35ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಪ್ರಕಾರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಡಿಸಿಪಿ ಸೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು MRPL ನಲ್ಲಿ ಭಾರೀ ಸ್ಫೋಟ; ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಸ್ಫೋಟದ ರಭಸಕ್ಕೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ ಸಹಿತ ಮನೆಗಳು ಕಂಪಿಸಿವೆ. ಬಾಗಿಲು, ಕಿಟಕಿಗಳ ಗಾಜುಗಳು ಹಾನಿಗೀಡಾಗಿವೆ. ಆಕಾಶದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ವಸತಿ ಪ್ರದೇಶ ಮಾತ್ರವಲ್ಲದೆ ಕಿಲೋ ಮೀಟರ್ ಗಟ್ಟಲೆ ಏರಿಯಾಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ವೇಳೆ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಹೊರ ಹೋಗಿದ್ದರಿಂದ ಭಾರಿ ಅನಾಹುತ ತಪ್ಪಿದೆ ಎಂದು ಮೂಲಗಳು ತಿಳಿಸಿವೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಎಕ್ಸ್ ಪೋಸ್ಟ್:
An explosion has been reported at @Ongc_Mrpl.
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) September 30, 2026
Regarding this, I have spoken to MRPL officials, the Police Commissioner, District Administration, representatives of Bajpe Town Panchayat about the same.
I have suspended all programmes scheduled in Belthangady today and am… pic.twitter.com/qpepF9A9YX
ಸಾರ್ವಜನಿಕರಲ್ಲಿ ಸಂಸದ ಚೌಟ ಭೇಟಿ
ಘಟನೆ ಬಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಎಂಆರ್‌ಪಿಎಲ್ ಅಧಿಕಾರಿಗಳು ಮತ್ತು ಪೊಲೀಸರ ಜತೆ ಮಾತುಕತೆ ನಡೆಸಿದ್ದಾರೆ. ನಿಗದಿತ ಕಾರ್ಯಕ್ರಮಗಳನ್ನೆಲ್ಲ ರದ್ದುಗೊಳಿಸಿ ಸ್ಥಳಕ್ಕೆ ತೆರಳುವುದಾಗಿ ಹೇಳಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ವದಂತಿ ನಂಬದಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರಿಗೆ ತೆರಳುತ್ತಿದ್ದ ಬಳಿ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು
ಹಿಂದೆಯೂ ದುರಂತ ಸಂಭವಿಸಿತ್ತು
ಎಂಆರ್‌ಪಿಎಲ್‌ನಲ್ಲಿ ಅವಘಡ ಸಂಭವಿಸುತ್ತಿರುವುದು ಇದು ಮೊದಲ ಸಲವೇನಲ್ಲ. 2025ರಲ್ಲಿ ಟ್ಯಾಂಕ್ ಪ್ಲಾಟ್‌ಫಾರ್ಮ್ ಮೇಲ್ಭಾಗದಲ್ಲಿ ತಪಾಸಣೆ ನಡೆಸುತ್ತಿದ್ದಾಗ ಅತ್ಯಂತ ಅಪಾಯಕಾರಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿತ್ತು. ಘಟನೆಯಲ್ಲಿ ಇಬ್ಬರು ಮೃತ ಪಟ್ಟಿದ್ದರು. 2012ರಲ್ಲಿ ಸಲ್ಫರ್ ರಿಕವರಿ ಯೂನಿಟ್ ಸಮೀಪ ವೆಲ್ಡಿಂಗ್ ಕೆಲಸ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಿಡಿ ತಗುಲಿ ಬೆಂಕಿ ಕಾಣಿಸಿಕೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದ.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.