ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahesh Shetty Thimarodi: ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

Mahesh Shetty Thimarodi: ಬಿ.ಎಲ್‌. ಸಂತೋಷ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಜಿರೆಯ ನಿವಾಸದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಗುರುವಾರ ಅರೆಸ್ಟ್‌ ಮಾಡಿದ್ದರು. ಅವರಿಗೆ ಇದೀಗ ಉಡುಪಿ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

Prabhakara R Prabhakara R Aug 23, 2025 5:52 PM

ಮಂಗಳೂರು: ಬಿ.ಎಲ್‌. ಸಂತೋಷ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಂಧನವಾಗಿದ್ದ ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಗೆ (Mahesh Shetty Thimarodi ) ಜಾಮೀನು ಮಂಜೂರಾಗಿದೆ. ಉಜೆರೆಯ ನಿವಾಸದಲ್ಲಿ ತಿಮರೋಡಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಉಡುಪಿ ಜಿಲ್ಲಾ ನ್ಯಾಯಾಲಯವು, ಬೇಲ್‌ ಮಂಜೂರು ಮಾಡಿದೆ.

ನ್ಯಾಯಾಂಗ ಬಂಧನದಲ್ಲಿದ್ದ ತಿಮರೋಡಿಯನ್ನು ಪೊಲೀಸ್‌ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರಿದ್ದರು. ಆದರೆ, ಎರಡು ಗಂಟೆಗಳ ಕಾಲ ಮಾತ್ರ ಪೊಲೀಸ್‌ ಕಸ್ಟಡಿಗೆ ನೀಡಿದ್ದ ಕೋರ್ಟ್‌, ಬಳಿಕ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ (BL Santosh) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರನ್ನು ಬ್ರಹ್ಮಾವರ ಪೊಲೀಸರು ಉಜಿರೆಯ ನಿವಾಸದಲ್ಲಿ ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಬಿ.ಎಲ್‌. ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಉಡುಪಿಯ ಬಿಜೆಪಿ ನಾಯಕ ರಾಜೀವ ಕುಲಾಲ್ ಪೊಲೀಸರಿಗೆ ದೂರು ನೀಡಿದ್ದರು. 2 ಬಾರಿ ನೋಟಿಸ್‌ ನೀಡಿದರೂ ಉತ್ತರಿಸಿದ ಕಾರಣ ತಿರೋಡಿ ಅವರನ್ನುಉಜಿರೆಯಿಂದ ವಶಕ್ಕೆ ಪಡೆಯಲಾಗಿತ್ತು.

ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ ಸಮಯದಲ್ಲಿ ಅವರ ಉಜಿರೆಯ ನಿವಾಸದ ಬಳಿ ಹೈಡ್ರಾಮಾ ನಡೆದಿತ್ತು.

ಈ ಸುದ್ದಿಯನ್ನೂ ಓದಿ | Dharmasthala Case: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನ; ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ