Dharmasthala case: ಮುಸುಕುಧಾರಿ ಬಂಧನ ನಿಜ, ಇದರ ಹಿಂದಿರುವ ಜಾಲ ಪತ್ತೆಗೆ ಕ್ರಮ: ಜಿ. ಪರಮೇಶ್ವರ್
ಬಂಧಿತನಿಗೆ ಮಂಪರು ಪರೀಕ್ಷೆ ಮಾಡಬೇಕಾ? ಬೇಡವಾ ಅನ್ನೋದು ಎಸ್ಐಟಿ ನಿರ್ಧಾರ ಮಾಡುತ್ತೆ. ಅಲ್ಲದೇ ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ಟಿತನಿಖೆಗೆ ಅಡ್ಡಿಯಾಗುತ್ತದೆ ಎಂದಿದ್ದಾರೆ.


ಮಂಗಳೂರು: ಧರ್ಮಸ್ಥಳ (Dharmasthala case) ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ ಪ್ರಕರಣದಲ್ಲಿ ಮುಸುಕುಧಾರಿ (Mask man) ಬಂಧನ ಆಗಿರುವುದು ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಖಚಿತಪಡಿಸಿದ್ದಾರೆ. ಗೃಹ ಸಚಿವರು ಈ ಪ್ರಕರಣದ ಕ್ಷಣಕ್ಷಣದ ಬೆಳವಣಿಗೆಗಳ ಕುರಿತು ಎಸ್ಐಟಿ (SIT) ಮುಖ್ಯಸ್ಥರಿಂದ ಮಾಹಿತಿ ಪಡೆಯುತ್ತಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.
ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ. ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ (SIT Investigation) ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್ಐಟಿಯಿಂದ ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದರು.
ಎಸ್ಐಟಿ ತನಿಖೆಯ ಮುಕ್ತಾಯ ಆಗುತ್ತಾ ಅಂತ ಹೇಳಲು ಬರುವುದಿಲ್ಲ. ಜೊತೆಗೆ ಬಂಧಿತನಿಗೆ ಮಂಪರು ಪರೀಕ್ಷೆ ಮಾಡಬೇಕಾ? ಬೇಡವಾ ಅನ್ನೋದು ಎಸ್ಐಟಿ ನಿರ್ಧಾರ ಮಾಡುತ್ತೆ. ಅಲ್ಲದೇ ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ಟಿತನಿಖೆಗೆ ಅಡ್ಡಿಯಾಗುತ್ತದೆ. ಯಾವುದನ್ನೂ ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಬಿಜೆಪಿಯವರು ಅನೇಕ ಆರೋಪಗಳನ್ನ ಮಾಡಬಹುದು. ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು. ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ. ಯಾವ ಸೆಕ್ಷನ್ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು. ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು. ಆದ್ರೆ ಎಸ್ಐಟಿ ಹೇಳಿದ್ದೆಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಮಂಗಳೂರು ಏರ್ಪೋರ್ಟ್ನಲ್ಲಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೋಹಂತಿ ಅವರಿಂದ ಮಾಹಿತಿ ಪಡೆದರು. ಬುರುಡೆ ಚಿನ್ನಯ್ಯನ ವಿಚಾರಣೆ ಹಾಗೂ ನಾಲ್ಕು ದಿನದ ಬೆಳವಣಿಗೆ ಬಗ್ಗೆ ಪಿನ್ ಟು ಪಿನ್ ಡೀಟೇಲ್ಸ್ ಪಡೆದರು. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದಕ್ಷಿಣ ಕನ್ನಡ ಎಸ್ಪಿ ಡಾ. ಅರುಣ್ ಕುಮಾರ್, ಎಸ್ಐಟಿ ಟೀಮ್ನ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಇದನ್ನೂ ಓದಿ: Dharmasthala Case: ಬುರುಡೆ ಮನುಷ್ಯನ ಹೆಸರು ರಿವೀಲ್, ಸಾಕ್ಷಿ ರಕ್ಷಣೆ ಹಿಂದೆಗೆತ, ನ್ಯಾಯಾಲಯಕ್ಕೆ ಹಾಜರು