Mangalore News: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ವಾಲಿಬಾಲ್ ಪ್ಲೇಯರ್ ಮೊಬೈಲ್‌ನಲ್ಲಿ ನೂರಾರು ಹುಡುಗಿಯರ ಜತೆಗಿನ ಖಾಸಗಿ ವಿಡಿಯೋಗಳು ಪತ್ತೆ!
Mangalore News: ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಾಲಿಬಾಲ್ ಆಟಗಾರನ ಮೇಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.


ಮಂಗಳೂರು: ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಾಲಿಬಾಲ್ ಆಟಗಾರನ ಮೇಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಸೈಯದ್ ಎಂಬಾತನ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಹಲ್ಲೆ ವೇಳೆ ವಿದ್ಯಾರ್ಥಿಯ ಮೊಬೈಲ್ ಕಿತ್ತುಕೊಂಡು ಪರಿಶೀಲಿಸಿದಾಗ ನೂರಾರು ಹುಡುಗಿಯರ ಜೊತೆಗಿನ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.
ಸೈಯದ್ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ವಾಲಿಬಾಲ್ ಆಟಗಾರ ಕೂಡ ಆಗಿದ್ದಾನೆ. ಒಬ್ಬ ವಿದ್ಯಾರ್ಥಿನಿಗೆ ಸೈಯದ್ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇನ್ನು ಏ.26 ರಂದು ಆರೋಪಿ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ ಇಬ್ಬರು ಹಿಂದೂ ಕಾರ್ಯಕರ್ತರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಯ ಸಮಯದಲ್ಲಿ, ಕಾರ್ಯಕರ್ತರು ಆತನ ಮೊಬೈಲ್ ಫೋನ್ ಅನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅದರಲ್ಲಿ ಆತ ವಿವಿಧ ಹುಡುಗಿಯರೊಂದಿಗಿದ್ದ ನೂರಾರು ವೀಡಿಯೊಗಳಿವೆ ಎಂದು ವರದಿಯಾಗಿದೆ.
ಹಲ್ಲೆಯ ನಂತರ, ಆರೋಪಿಯು ಪ್ರತಿದೂರು ದಾಖಲಿಸಿದ್ದು, ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗೆ ಇತರ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದನೇ ಎಂಬುವುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Pahalgam terror attack: ಕುತಂತ್ರಿ ಪಾಕ್‌ಗೆ ಮತ್ತೊಂದು ಶಾಕ್; ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳು ಬ್ಯಾನ್; BBC ಗೂ ವಾರ್ನಿಂಗ್
ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣದ ಪ್ರಮುಖ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಕಾರವಾರ: ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣದ ಪ್ರಮುಖ ಆರೋಪಿ ಮೌಸಿನ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಕೆಜಿ ಹಳ್ಳಿ-ಡಿಜೆ ಹಳ್ಳಿ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ. ಹೀಗಾಗಿ ಇನ್ನುಳಿದ ಪ್ರಕರಣದಲ್ಲಿ ಬಾಡಿ ವಾರಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಆರೋಪಿ ಮೌಸಿನ್ ವಿರುದ್ಧ ಉತ್ತರ ಕನ್ನಡ, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಈತ ಉಗ್ರರ ಜತೆ ಸಂಪರ್ಕ ಹೊಂದಿದ್ದರ ಬಗ್ಗೆಯೂ ಮಾಹಿತಿ ಇದೆ. ಈ ಕಾರಣಕ್ಕಾಗಿಯೇ ಎನ್ಐಎ ಕೂಡ ಈತನ ಮನೆ ಮೇಲೆ ದಾಳಿ ನಡೆಸಿತ್ತು.
ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಪಿಎಫ್‌ಐ ಕಾರ್ಯಕರ್ತನಾಗಿದ್ದಲ್ಲದೇ ಉಗ್ರರಿಂದ ತರಬೇತಿ ಪಡೆದಿದ್ದ. ಈ ಹಿಂದೆ ಉಗ್ರ ಚಟುವಟಿಕೆ ಸಂಬಂಧಿಸಿ ಶಿರಸಿಯಲ್ಲಿ ಎನ್ಐಎಯಿಂದ ಬಂಧಿತನಾಗಿದ್ದ ಸಾದಿಕ್, ಆರೋಪಿ ಮೌಸೀನ್ಗೆ ತರಬೇತಿ ನೀಡಿದ್ದ. ಅಲ್ಲದೇ ಶಿರಸಿಯಲ್ಲಿ 302 ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದಾನೆ.
2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಪ್ರಮುಖ ಆರೋಪಿ, ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್‌ನನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಂಧಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ 5ನೇ ಆರೋಪಿ ಮೌಸಿನ್, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠಾಸೀನ ಶಿರಸಿ ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ. ಈ ಆರೋಪಿಯ ಪತ್ತೆಗಾಗಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿ.ಎಸ್.ಐ ರಾಜಕುಮಾರ ಉಕ್ಕಲಿ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ | Pahalgam Terror Attack: ದಾಳಿಗೂ ಮುನ್ನ ಉಗ್ರರ ಪ್ಲಾನ್ ಹೇಗಿತ್ತು? ಸಂದೇಶ ಕಳುಹಿಸಲು ಬಳಸಿದ್ರು ಚೀನಾ ಮೆಸೆಂಜರ್ ಅಪ್ಲಿಕೇಶನ್!
ಆರೋಪಿ ಮೌಸಿನ್ ಮನೆಯ ಮೇಲೆ ಈ ಹಿಂದೆ ಎನ್‌ಐಎ ದಾಳಿ ಮಾಡಿತ್ತು. ಇದರಿಂದ ತಲೆ ಮರೆಸಿಕೊಂಡು ಓಡಾಡುತ್ತಾ ಮಹಾರಾಷ್ಟ್ರದ ಅಮೀನಗಡ, ಬಾಂಬೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ವಾಸವಾಗಿದ್ದ. ಬಳಿಕ ತನ್ನ ಕಟುಂಬದವರೊಂದಿಗೆ ಹೈದರಾಬಾದ್‌ಗೆ ಹೋಗಿ ಅಲ್ಲಿಂದ ವಾಪಸ್ ಬರುತ್ತಿರಬೇಕಾದರೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.