ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಚೋದನಕಾರಿ ದ್ವೇಷ ಭಾಷಣ; ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಜೈಲು ಶಿಕ್ಷೆ

Riyaz Parangipete: 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.

ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಜೈಲು ಶಿಕ್ಷೆ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Aug 5, 2026 8:48 AM

ಮಂಗಳೂರು: 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ (Riyaz Parangipete) ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ. ಆರೋಪಿ ವಿರುದ್ಧ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಪ್ರಿನ್ಸಿಪಲ್ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ರಿಯಾಜ್ ಪರಂಗೀಪೇಟೆಗೆ 6 ತಿಂಗಳ ಸಾದಾ ಕಾರಾಗೃಹ ವಾಸದ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲಾಗಿದೆ.

2015ರ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಚೇರಿ ಬಳಿ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಿದ್ದ ರಿಯಾಜ್ ಪರಂಗೀಪೇಟೆ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಹಾಗೂ ಸಮಾಜದಲ್ಲಿ ಪ್ರಚೋದನೆ ಸೃಷ್ಟಿಸುವ ರೀತಿಯಲ್ಲಿ ಮಾತುಗಳನ್ನಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಎಫ್‌ಐಆರ್‌ ಸಹ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣೆಯ ಉಪನಿರೀಕ್ಷಕರು ತನಿಖಾಧಿಕಾರಿ ರವಿ ಬಿ.ಎಸ್. ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಸಾಕ್ಷ್ಯಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಶಿಕ್ಷೆ ಪ್ರಕಟಿಸಿದೆ.

POCSO ಪ್ರಕರಣ,ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ, 20 ವರ್ಷದ ಸೋನು ಮ್ಯಾಕ್ಲೀನ್ ನೊರೊನ್ಹಾ ಎಂಬ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ FTSC (2) POCSO ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹವಾಸ ಮತ್ತು 50,000 ರೂಪಾಯಿ ದಂಡ ವಿಧಿಸಿದೆ.

ಯುವತಿಯರಿಗೆ ಚುಡಾಯಿಸಿದ ಕಿಡಿಗೇಡಿಗಳಿಗೆ ಗ್ರಾಮಸ್ಥರು ನೀಡಿದ ಶಿಕ್ಷೆ ಏನು ಗೊತ್ತಾ? ಸ್ಟೋರಿ ಓದಿ ಶಾಕ್‌ ಆಗ್ತೀರಾ

ಸೋನು ಫೆಬ್ರವರಿ 2024 ರಿಂದ ಸಂತ್ರಸ್ತ ಅಪ್ರಾಪ್ತ ಬಾಲಕಿಯೊಂದಿಗೆ ಸಂಬಂಧ ಹೊಂದಿದ್ದನು. ಆತ ಸೆಪ್ಟೆಂಬರ್ 2024 ಮತ್ತು ಸೆಪ್ಟೆಂಬರ್ 2025 ರ ನಡುವೆ ಮಂಗಳೂರಿನ ಅಲಪೆಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದನು ಎನ್ನಲಾಗಿದೆ. ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ್ಯಾಯಾಲಯವು ಆತನಿಗೆ POCSO ಕಾಯಿದೆಯ ಸೆಕ್ಷನ್ 6 ಮತ್ತು BNS ನ ಸೆಕ್ಷನ್ 64(2)(m) ಅಡಿಯಲ್ಲಿ ಶಿಕ್ಷೆ ವಿಧಿಸಿದೆ. ಹಾಗೆಯೇ POCSO ಕಾಯಿದೆಯ ಸೆಕ್ಷನ್ 15 ಮತ್ತು BNS ನ ಸೆಕ್ಷನ್ 77 ರ ಅಡಿಯಲ್ಲಿ ಒಂದು ವರ್ಷದ ಸರಳ ಕಾರಾಗೃಹವಾಸ ಹಾಗೂ 5,000 ರೂಪಾಯಿ ದಂಡ, ಮತ್ತು ಐಟಿ (IT) ಕಾಯಿದೆಯ ಸೆಕ್ಷನ್ 66(e) ರ ಅಡಿಯಲ್ಲಿ ಒಂದು ವರ್ಷದ ಸರಳ ಕಾರಾಗೃಹವಾಸ ಹಾಗೂ 5,000 ರೂಪಾಯಿ ದಂಡ ವಿಧಿಸಿದೆ.