ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Soujanya Case: ಸೌಜನ್ಯ ಪ್ರಕರಣದ ಮರುತನಿಖೆ ಆದೇಶವನ್ನು ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ

ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶದ ಪ್ರತಿಕ್ರಿಯಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ, ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ. ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಎಂದು ತಿಳಿಸಿದೆ.

ಸೌಜನ್ಯ ಪ್ರಕರಣದ ಮರುತನಿಖೆ ಆದೇಶ ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ

-

Prabhakara R
Prabhakara R Sep 21, 2026 8:42 PM

ಧರ್ಮಸ್ಥಳ: ಮಾನ್ಯ ಸರ್ವೋಚ್ಚ ನ್ಯಾಯಾಲಯವು ಕುಮಾರಿ ಸೌಜನ್ಯ ಪ್ರಕರಣವನ್ನು (Soujanya Case) ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ನಿರ್ಧಾರವನ್ನು ನಾವು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ (Sri Kshetra Dharmasthala) ತಿಳಿಸಿದೆ.

ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶದ ಪ್ರತಿಕ್ರಿಯಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ. ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ನಾವು ಆಶಿಸುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಕಚೇರಿಯ ವ್ಯವಸ್ಥಾಪಕ ಕೆ.ಪಾರ್ಶ್ವನಾಥ್‌ ಜೈನ್‌ ತಿಳಿಸಿದ್ದಾರೆ.

ಏನಿದು ಪ್ರಕರಣ?

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿತ್ತು. ಸೌಜನ್ಯಾ, ಕಾಲೇಜು ಮುಗಿಸಿ ಮನೆಗೆ ಹಿಂದಿರುಗುವಾಗ ಅಪಹರಣಕ್ಕೊಳಗಾಗಿ, ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಕೊಲೆಯಾಗಿದ್ದಳು. ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿ 'ಸಂತೋಷ್ ರಾವ್' ಎಂಬ ಮಾನಸಿಕ ಅಸ್ವಸ್ಥ ಎನ್ನಲಾದ ವ್ಯಕ್ತಿಯನ್ನು ಬಂಧಿಸಿದ್ದರು. ಜೂನ್ 2023 ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದ ಸಂತೋಷ್ ರಾವ್‌ನನ್ನು ದೋಷಮುುಕ್ತಗೊಳಿಸಿತು.

ನಂತರ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಸುದೀರ್ಘ ಕಾನೂನು ಹೋರಾಟದ ನಂತರ, ಇದೀಗ ಸುಪ್ರೀಂ ಕೋರ್ಟ್ ಹೊಸದಾಗಿ ವಿಶೇಷ ತನಿಖಾ ತಂಡ (SIT) ರಚಿಸಿ ಮರುತನಿಖೆ ನಡೆಸಲು ಆದೇಶ ನೀಡಿದೆ.