Mangaluru Cargo ship sinks: ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಸರಕು ಹಡಗು ಮುಳುಗಡೆ; 6 ಸಿಬ್ಬಂದಿಯ ರಕ್ಷಣೆ
Mangaluru News: ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು, ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಗ್ರಿ ಹೊತ್ತು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ.


ಮಂಗಳೂರು: ಮಂಗಳೂರಿನಿಂದ ಲಕ್ಷ ದೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆಯಾಗಿ (Mangaluru Cargo ship sinks), ಅದೃಷ್ವವಶಾತ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸುಮಾರು 60 ನಾಟಿಕಲ್ ಮೈಲು ದೂರದಲ್ಲಿದ್ದಾಗ ಎಂಎಸ್‌ವಿ ಸಲಾಮತ್ ಎಂಬ ಹೆಸರಿನ ಹಡಗು ಮುಳುಗಿದ್ದು, ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿ, 6 ಸಿಬ್ಬಂದಿಯನ್ನು ರಕ್ಷಣೆ ಮಾಡಿದೆ.
ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಗ್ರಿ ಹೊತ್ತು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ.
ಹಡಗಿನಲ್ಲಿ 6 ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಎಲ್ಲಾ ಸಿಬ್ಬಂದಿ ಹಡಗಿನಿಂದ ಹಾರಿ ಸಣ್ಣ ಡಿಂಗಿ ಬೋಟಿನಲ್ಲಿ ಪ್ರಾಣ ಉಳಿಸಿಕೊಂಡಿದ್ದಾರೆ. ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್‌ನ ‘ವಿಕ್ರಂ’ ಶಿಪ್ ನಲ್ಲಿ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಇಸ್ಮಾಯಿಲ್ ಶರೀಫ್, ಅಲೆಮನ್ ಅಹ್ಮದ್ ಬಾಯ್ ಗಾವ್ಡ, ಕಾಕಲ್ ಸುಲೇಮಾನ್ ಇಸ್ಮಾಯಿಲ್, ಅಕ್ಬರ್ ಅಬ್ದುಲ್ ಸುರಾನಿ, ಕಸಂ ಇಸ್ಮಾಯಿಲ್ ಮತ್ತು ಅಜ್ಮಲ್ ಅವರನ್ನು ರಕ್ಷಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Operation Sindoor: ಆಪರೇಷನ್ ಸಿಂದೂರ್ ವೇಳೆ ಪಾಕಿಸ್ತಾನ ಬಳಸುತ್ತಿದ್ದ ಚೀನಾದ ವಾಯು ರಕ್ಷಣಾ ವ್ಯವಸ್ಥೆ ಜಾಮ್
ಮುಂದಿನ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಮೇ 16ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ದಿನಗಳ ಕಾಲ ಕರಾವಳಿ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಲಿದ್ದು, ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 20°C ಇರುವ ಸಾಧ್ಯತೆ ಇದೆ.
ಮೇ 17ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.
ಮೇ 18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.
ಮೇ 19ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಹಿಮೋಗ್ಲೋಬಿನ್ ಹೆಚ್ಚಿಸುವ ಆಹಾರಗಳು ಗೊತ್ತೇ?
ಮೇ 20 ಮತ್ತು 21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.