Shiradi ghat accident: ಶಿರಾಡಿ ಘಾಟ್‌ನಲ್ಲಿ ಭೀಕರ ಅಪಘಾತ; ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿಯಾಗಿ ಮೂವರ ದುರ್ಮರಣ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಘಾಟ್‌ನ ಗುಂಡ್ಯ ಸಮೀಪ ಶುಕ್ರವಾರ ಸಂಜೆ ಭೀಕರ ಅಪಘಾತ ನಡೆದಿದೆ. ಧರ್ಮಸ್ಥಳದಿಂದ ತಿರುಪತಿಗೆ ಹೋಗುತ್ತಿದ್ದ ರಾಜಹಂಸ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಶಿರಾಡಿ ಘಾಟ್‌ನ ಗುಂಡ್ಯ ಸಮೀಪ ಕಾರು-ಬಸ್ ಡಿಕ್ಕಿಯಾಗಿರುವುದು. -
ಮಂಗಳೂರು: ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ಸ್ಥಳದಲ್ಲೇ ಮೃತಪಟ್ಟಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಘಾಟ್‌ನ (Shiradi ghat accident) ಗುಂಡ್ಯ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ತಿರುಪತಿಗೆ ಹೋಗುತ್ತಿದ್ದ ರಾಜಹಂಸ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಶಿಶಿಲ ನಿವಾಸಿ ಚಂದ್ರಶೇಖರ್ (57) ಹಾಗೂ ಉಜಿರೆ ನಿವಾಸಿಗಳಾದ ಶ್ರೀಧರ್ ಗೌಡ (61) ಮತ್ತು ಜನಾರ್ದನ ಗೌಡ (58) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಉಜಿರೆಯ ಸುರೇಶ (58) ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಕಲೇಶಪುರಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘೋರ ದುರಂತ; ಶಾಲಾ ಬಸ್ಸಿನ ತೂತಾದ ತಳಭಾಗದಿಂದ ಬಿದ್ದು 1ನೇ ತರಗತಿ ವಿದ್ಯಾರ್ಥಿನಿ ಸಾವು
ಶಿರಾಡಿ ಘಾಟ್‌ನಲ್ಲಿ ಅಪಘಾತದಿಂದ ಕೆಲ ಸಮಯ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಅಪಘಾತ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.