Belthangady News: ಬೆಳ್ತಂಗಡಿಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು; ಶಾಕಿಂಗ್ ವಿಡಿಯೊ ಇಲ್ಲಿದೆ!
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಘಟನೆ ನಡೆದಿದೆ. ಬಸ್ ಬಾಗಿಲು ಏಕಾಏಕಿ ತೆರೆದುಕೊಂಡಿದ್ದರಿಂದ ಅಕ್ಕ ಕೆಳಗೆ ಬೀಳುತ್ತಿದ್ದಾಗ, ಆಕೆಯನ್ನು ರಕ್ಷಿಸಲು ತಂಗಿ ಮುಂದಾಗಿದ್ದಾಳೆ. ಈ ವೇಳೆ ಇಬ್ಬರೂ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳ್ತಂಗಡಿ ಬಳಿ ವಿದ್ಯಾರ್ಥಿನಿಯರು ಬಸ್‌ನಿಂದ ಕೆಳಗೆ ಬಿದ್ದಿರುವುದು. -
ಬೆಳ್ತಂಗಡಿ: ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಇಬ್ಬರು ವಿದ್ಯಾರ್ಥಿನಿಯರು (girl students) ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ (Belthangady) ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ನಡೆದಿದೆ. ಗೇರುಕಟ್ಟೆಯಿಂದ ಬೆಳ್ತಂಗಡಿಗೆ ತೆರಳಲು ಇಬ್ಬರು ಸಹೋದರಿಯರು ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ರೇಷ್ಮೆ ಕ್ರಾಸ್ ರೋಡ್ ಬಳಿ ತಿರುವಿನಲ್ಲಿ ಒಮ್ಮೆಲೆ ಬಸ್ನ ಬಾಗಿಲು ತೆರೆದು ವಿದ್ಯಾರ್ಥಿನಿಯರು ಕೆಳಕ್ಕೆ ಬಿದ್ದಿದ್ದಾರೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸ್ನ ಬಾಗಿಲು ಏಕಾಏಕಿ ತೆರೆದಿದ್ದರಿಂದ ಅಕ್ಕ ಕೆಳಗೆ ಬೀಳುತ್ತಿದ್ದಾಗ, ಆಕೆಯನ್ನು ರಕ್ಷಿಸಲು ತಂಗಿ ಮುಂದಾಗಿ ನಿಯಂತ್ರಣ ತಪ್ಪಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಾಹಿತಿ ಪ್ರಕಾರ ಒಬ್ಬ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದರೆ, ಮತ್ತೊಬ್ಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ. ಇವರು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಾಗರಾಜ ಹಾಗೂ ರೂಪ ದಂಪತಿ ಮಕ್ಕಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಚಿಕಿತ್ಸೆ ಬಳಿಕ ಸಹಾಯಕಿಯ ನೆರವಿನೊಂದಿಗೆ ಗಾಯಾಳು ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ಮಾಹಿತಿ ಲಭ್ಯವಾಗಿದೆ.
ಕರಾವಳಿಗೆ ಪ್ರವಾಸ ಬಂದಿದ್ದ ಬೆಂಗಳೂರಿನ ಕುಟುಂಬದ ಇಬ್ಬರು ಅಪಘಾತಕ್ಕೆ ಬಲಿ, ನಾಲ್ವರಿಗೆ ಗಾಯ
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ: ಪ್ರಯಾಣಿಕರು ಪಾರು
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಹೆದ್ದಾರಿಯಲ್ಲಿ ವೇ ವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನ ಚಾಲಕ ಮತ್ತು ಪ್ರಯಾಣಿಕರು ಹೆದ್ದಾರಿ ಮಧ್ಯೆಯೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಅವರು ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಕಾರಿನಾದ್ಯಂತ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಕಾರು ಬೆಂಕಿಗಾಹುತಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.