Physical Abuse: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಮಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
Crime News: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರ ವಲಯದಲ್ಲಿರುವ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ರಿಕ್ಷಾ ಚಾಲಕ ಸೇರಿ ಮೂವರು ಬುಧವಾರ (ಏ. 16) ರಾತ್ರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಸದ್ಯ ತನಿಖೆ ಮುಂದುವರಿದಿದೆ.

ಸಾಂದರ್ಭಿಕ ಚಿತ್ರ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರ ವಲಯದಲ್ಲಿರುವ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ರಾಜ್ಯವೇ ಬೆಚ್ಚಿ ಬಿದ್ದಿದೆ (Physical Abuse). ಅರೆಪ್ರಜ್ಞಾವಸ್ಥೆಯಲ್ಲಿ ಅಂತಾರಾಜ್ಯದ ಯುವತಿ ಕಂಡು ಬಂದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ರಿಕ್ಷಾ ಚಾಲಕ ಸೇರಿ ಮೂವರು ಬುಧವಾರ (ಏ. 16) ರಾತ್ರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಸದ್ಯ ಪೊಲೀಸರು ರಿಕ್ಷಾ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.
ಸಂತ್ರಸ್ತೆಯನ್ನು ಪಶ್ಚಿಮ ಬಂಗಾಳ ಮೂಲದ ಯುವತಿ ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಸಮೀಪದಲ್ಲೇ ಇರುವ ಕೇರಳದ ಕಾಸರಗೋಡಿನ ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಗೆಳೆಯನೊಂದಿಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಈ ಸುದ್ದಿಯನ್ನೂ ಓದಿ: Assault Case: ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ, ಪ್ರಶ್ನಿಸಿದವರ ಮೇಲೆ ಮಾರಕ ಹಲ್ಲೆ ಎಸಗಿ ಕಾಮುಕ ಪರಾರಿ
ಘಟನೆಯ ವಿವರ
ತಡರಾತ್ರಿ ಯುವತಿ ನಶೆಯಲ್ಲಿ ಸ್ಥಳೀಯರ ಮನೆ ಬಾಗಿಲು ಬಡಿದಿದ್ದರು. ನೀರು ಕೇಳಿದ ಯುವತಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಾಗ ಅವರ ಮೈಮೇಲೆ ಗಾಯದ ಗುರುತು ಕಂಡುಬಂದಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಸಾಮಾಹಿಕ ಅತ್ಯಾಚಾರ ನಡೆದಿರುವ ವಿವಾರ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಉದ್ಯೋಗ ಅರಸಿ ಪಶ್ಚಿಮ ಬಂಗಾಳದಿಂದ ಬಂದಿದ್ದ ಯುವತಿ ಉಪ್ಪಳದಲ್ಲಿ ವಾಸವಾಗಿದ್ದಾರೆ. ಕಾರ್ಯ ನಿಮಿತ್ತ ಅವರು ಗೆಳೆಯನೊಂದಿಗೆ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಜಗಳ ಆರಂಭವಾಗಿದೆ. ಇದು ತಾರಕಕ್ಕೇರಿ ಆಕೆ ಒಬ್ಬರೆ ಆಚೆ ಬಂದಿದ್ದಾರೆ. ಈ ವೇಳೆ ಅಲ್ಲೇ ಇದ್ದ ರಿಕ್ಷಾಕ್ಕೆ ಹತ್ತಿದ್ದಾರೆ. ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದೊಯ್ದ ರಿಕ್ಷಾ ಚಾಲಕ ತನ್ನ ಗೆಳೆಯರೊಂದಿಗೆ ಸೇರಿ ಅಮಲು ಪದಾರ್ಥ ನೀಡಿ ಕೃತ್ಯ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಅತ್ಯಾಚಾರ ಎಸಗಿದ ಬಳಿಕ ಯುವತಿಯನ್ನು ಬಿಟ್ಟು ಅವರೆಲ್ಲ ಪರಾರಿಯಾಗಿದ್ದರು. ಗಾಯಗೊಂಡಿದ್ದ ಯುವತಿ ಹೇಗೂ ಸಮೀಪದಲ್ಲಿದ್ದ ಮನೆಯೊಂದಕ್ಕೆ ತೆರಳಿ ಬಾಗಿಲು ಬಡಿದಿದ್ದರು. ನೀರು ಕೇಳುತ್ತಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದುಬಿಟ್ಟರು. ಬಳಿಕ ಮನೆಯವರು ಪೊಲೀಸರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಸದ್ಯ ಪೊಲೀಸ್ ಕಮೀಷನರ್ ಅನುಪಮ್ ಅಗರ್‌ವಾಲ್ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಭಾವಿ ಪತಿಯ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
ಲಖನೌ: ಮದುವೆಯಾಗಲಿರುವ ಹುಡುಗನ ಮುಂದೆಯೇ ಹುಡುಗಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದಿತ್ತು. ಇಬ್ಬರ ನಿಶ್ಚಿತಾರ್ಥ ನಡೆದಿತ್ತು, ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರ ಮದುವೆ ಕೂಡ ನಡೆಯುವುದಿತ್ತು. ಆದರೆ ಕಾಮುಕರು ಹುಡುಗನ ಮುಂದೆಯೇ ಆಕೆಯ ಮೇಲೆ ಮೃಗಗಳಂತೆ ಎರಗಿದ್ದರು. ಉತ್ತರ ಪ್ರದೇಶದ ಕಾಸ್ಗಂಜ್‌ನಲ್ಲಿ ಈ ಘಟನೆ ನಡೆದಿದ್ದು, 8 ಮಂದಿ ಕಾಮುಕರು ಈ ಕೃತ್ಯ ನಡೆಸಿದ್ದರು. ವರನನ್ನು ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸದ್ಯ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ.