ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

School holidays: ದಸರಾ ರಜೆ ಅಂತ್ಯ, ನಾಳೆಯಿಂದ ಶಾಲೆಗಳು ಪುನರಾರಂಭ, ರಜೆ ಅ.17ರವರೆಗೆ ವಿಸ್ತರಿಸಲು ಮನವಿ

Dasara holidays: ಒಟ್ಟು 18 ದಿನಗಳ ಕಾಲ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಸಿಕ್ಕಿತ್ತು. ರಜೆಯ ಮಜಾ ನಾಳೆಗೆ ಅಂತ್ಯಗೊಳ್ಳಲಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭಗೊಳ್ಳಲಿವೆ. ಆದರೆ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನದವರೆಗೆ ತರಗತಿಗಳು ನಡೆಯಲಿದೆ

ದಸರಾ ರಜೆ ಅಂತ್ಯ, ನಾಳೆಯಿಂದ ಶಾಲೆಗಳು ಪುನರಾರಂಭ, ರಜೆ ವಿಸ್ತರಿಸಲು ಮನವಿ

-

ಹರೀಶ್‌ ಕೇರ ಹರೀಶ್‌ ಕೇರ Oct 7, 2025 11:38 AM

ಬೆಂಗಳೂರು: ಸೆಪ್ಟೆಂಬರ್ 20ರಿಂದ ಅ.8ರವರೆಗೆ ಶಾಲಾ ಮಕ್ಕಳಿಗೆ ನೀಡಿದ್ದ ದಸರಾ ರಜೆ (School holidays) ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ. ಇದರ ಬೆನ್ನಲ್ಲೆ ದಸರಾ ರಜಾ (dasara holidays) ಅವಧಿ ವಿಸ್ತರಣೆ ಮಾಡುವಂತೆ ಇದೀಗ ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಗಣತಿ (Caste census) ವಿಸ್ತರಣೆ ಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಚಿವರಿಗೆ ಈ ಮನವಿ ಮಾಡಿಕೊಳ್ಳಲಾಗಿದೆ.

ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ಅ.8ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು. ಒಟ್ಟು 18 ದಿನಗಳ ಕಾಲ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಸಿಕ್ಕಿತ್ತು. ರಜೆಯ ಮಜಾ ನಾಳೆಗೆ ಅಂತ್ಯಗೊಳ್ಳಲಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭಗೊಳ್ಳಲಿವೆ. ಆದರೆ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: Caste Census: ಮುಗಿಯದ ಜಾತಿ ಗಣತಿ, ಶಿಕ್ಷಕರಿಗೆ ಬಿತ್ತು ಡಬಲ್‌ ಡ್ಯೂಟಿ

ರಾಜ್ಯದಲ್ಲಿ ಜಾತಿ ಗಣತಿ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಸೂಚನೆ ನೀಡಲಾಗಿದೆ. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಹೀಗಾಗಿ ಮಧ್ಯಾಹ್ನದ ನಂತರ ಮಕ್ಕಳಿಗೆ ಬಿಡುವು ಇರಲಿದೆ. ಬೆಂಗಳೂರಲ್ಲಿ ಅಕ್ಟೋಬರ್ 24ರವರೆಗೆ ಮಧ್ಯಾಹ್ನದ ಬಳಿಕ ಶಾಲೆಗಳಿಗೆ ರಜೆ ನೀಡಲಾಗಿದೆ.

ರಜೆ ವಿಸ್ತರಣೆಗೆ ಮನವಿ

ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಲಾಗಿದ್ದು, ಇದರ ಬೆನ್ನಲ್ಲೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಇದೀಗ ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. ಸಮೀಕ್ಷೆಗಳು ವಿಸ್ತರಣೆ ಬೆನ್ನಲ್ಲೇ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ.

ಶಿಕ್ಷಕರು ಸೆಪ್ಟೆಂಬರ್ 22ರಿಂದ ಜಾತಿಗಣತಿ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸರ್ವೇ ಇನ್ನೂ ಗೊಂದಲದಲ್ಲಿ ನಡೆಯುತ್ತಿದೆ. ಹೀಗಾಗಿ ಶಿಕ್ಷಕರು ದೈಹಿಕ ಹಾಗೂ ಬೌದ್ಧಿಕವಾಗಿ ಒತ್ತಡದಲ್ಲಿ ಇದ್ದಾರೆ. ಅವರಿಗೆ ದೈಹಿಕ ಹಾಗು ಮಾನಸಿಕ ವಿರಾಮದ ಅವಶ್ಯಕತೆ ಇದೆ. ಹಾಗಾಗಿ ಅಕ್ಟೋಬರ್ 17ರವರೆಗೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.