Laxmi Hebbalkar: ಫಲಾನುಭವಿಗಳ ಸುರಕ್ಷತೆಗೆ ಗಮನ ಹರಿಸಿ: ಲಕ್ಷ್ಮೀ ಹೆಬ್ಬಾಳ್ಕರ್
ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಹರಿಹರ: ಮೇ 20ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಅಧಿಕಾರಿಗಳಿಗೆ ಸೂಚನೆ ನೀಡಿದರು. ಹರಿಹರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು, ಆಹಾರ, ಔಷಧೋಪಚಾರ, ಕುಡಿಯುವ ನೀರು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ತಿಳಿಸಿದರು.
ಫಲಾನುಭವಿಗಳನ್ನು ಮನೆಯ ಸದಸ್ಯರಂತೆ ಕಂಡು ಅವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಪ್ರತಿಯೊಬ್ಬ ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಹೋಬಳಿ ಮಟ್ಟದಲ್ಲಿ ಅಧಿಕಾರಿಗಳನ್ನು ನಿಯೋಜಿಸಿ, ಫಲಾನುಭವಿಗಳಿಗೆ ನೆರವಾಗಬೇಕು ಎಂದು ಅವರು ಆದೇಶಿಸಿದರು.
ಪಕ್ಷಾತೀತವಾಗಿ ಕ್ಷೇತ್ರಗಳ ಅಭಿವೃದ್ಧಿ
ಯಾವುದೇ ರಾಜಕಾರಣ ಮಾಡದೇ ಪಕ್ಷಾತೀತವಾಗಿ ಸಿದ್ದರಾಮಯ್ಯನವರ ಸರ್ಕಾರ ಎಲ್ಲ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡುತ್ತಿದೆ. ಬಹಳ ಕಾಳಜಿಯಿಂದ ಹರಿಹರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಈ ಸುದ್ದಿಯನ್ನೂ ಓದಿ | RRB Recruitment 2025: ರೈಲ್ವೆಯ 9,970 ಹುದ್ದೆಗಳ ಭರ್ತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ಟೇಬಲ್
ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್, ತಹಸೀಲ್ದಾರ್ ಬಸವರಾಜು, ತಾಲೂಕು ಪಂಚಾಯಿತಿ ಇಒ ಸುಮಲತಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಗಾವಿ ಶ್ರೀನಿವಾಸ್ ಉಪಸ್ಥಿತರಿದ್ದರು.