ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಾವಣಗೆರೆ ದಕ್ಷಿಣ ಉಪಚುನಾವಣೆ; ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ!

Karnataka bypolls: ದಾವಣಗೆರೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರು, ನಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಟಿಕೆಟ್ ಘೋಷಣೆಗೂ ಮೊದಲೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ!

ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು‌ ನಾಮಪತ್ರ ಸಲ್ಲಿಕೆ. -

Prabhakara R
Prabhakara R Mar 20, 2026 3:48 PM

ದಾವಣಗೆರೆ: ಉಪ ಚುನಾವಣೆ (Karnataka bypolls) ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಕಾಂಗ್ರೆಸ್‌ನಲ್ಲಿ ಯಾರಿಗೆ ಟಿಕೆಟ್‌ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು (Samarth Shamanur) ನಾಮಪತ್ರ ಸಲ್ಲಿಸಿರುವುದು ಕಂಡುಬಂದಿದೆ.

ತಾಯಿ ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರು, ನಮ್ಮ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಇದೀಗ ಟಿಕೆಟ್ ಘೋಷಣೆಯಾಗುವ ಮೊದಲೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಪಕ್ಷವನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ.

ಸಮರ್ಥ್ ಶಾಮನೂರು ಅವರು ಒಂದಲ್ಲ ಎರಡು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷದಿಂದ ಒಂದು ನಾಮಪತ್ರ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ, ಶಾಮನೂರು ಕುಟುಂಬದ ನಡೆ ಭಾರೀ ಕುತೂಹಲ ಮೂಡಿಸಿದೆ.

ಜ್ಯೋತಿಷ್ಯರ ಸಲಹೆ ಮೇರೆಗೆ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಅಮೃತ ಸಿದ್ದಿಯೋಗದ ಸಮಯದಲ್ಲಿ ನಾಮಪತ್ರ ಸಲ್ಲಿಸಲು ಜೋತಿಷ್ಯರ ಸಲಹೆ ನೀಡಿದ್ದರಂತೆ. ಈ ಹಿನ್ನೆಲೆ ಇಂದು‌ ಮಲ್ಲಿಕಾರ್ಜುನ್ ಪುತ್ರ ಸಮರ್ಥ ಟಿಕೆಟ್ ಘೋಷಣೆಗೂ ಮುನ್ನ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.‌

Karnataka Assembly Bypoll: ವಿಧಾನಸಭೆ ಉಪಚುನಾವಣೆ: ಬಾಗಲಕೋಟೆಗೆ ವೀರಣ್ಣ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ಟಿ. ಬಿಜೆಪಿ ಅಭ್ಯರ್ಥಿ

ಟಿಕೆಟ್ ನನಗೇ ಸಿಗುತ್ತದೆ ಎಂದ ಸಮರ್ಥ್

ನಾಮಪತ್ರ ಸಲ್ಲಿಕೆಗೂ ಮುನ್ನ ಸಮರ್ಥ್‌ ಅವರಿಗೆ 'ಅಧಿಕೃತವಾಗಿ ಬಿ-ಫಾರಂ ಸಿಕ್ಕಿದೆಯಾ?' ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಅವರು, 'ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನೀವು ಓದಿದ್ದೀರಾ? ಈ ಪಕ್ಷವನ್ನು ಕಟ್ಟಿದವರೇ ಅವರು. ನಮ್ಮ ಪಾರ್ಟಿ ಕಾರ್ಯಕರ್ತರ ಮೇಲೆ ನಮಗೆ ನಂಬಿಕೆ ಇದೆ, ಟಿಕೆಟ್ ನಮಗೆ ಸಿಗುತ್ತದೆ ಎಂಬ ವಿಶ್ವಾಸವಿದೆ' ಎಂದು ತಿಳಿಸಿದ್ದಾರೆ.