ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ವಿಜಯೇಂದ್ರ ಕಿಡಿ
BY Vijayendra: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಸಂದರ್ಭದಲ್ಲಿ ಶಾಂತಿಯುತ ಮೆರವಣಿಗೆ ನಡೆಯುತ್ತಿತ್ತು. ಅಲ್ಲಿ ಒಂದು ಧರ್ಮದ ದೇಶದ್ರೋಹಿಗಳು ಕಲ್ಲೆಸೆದಿದ್ದಾರೆ. ಕೋಮುಗಲಭೆ ಸೃಷ್ಟಿಸುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ವಿಬಿ-ಜಿ ರಾಮ್ ಜಿ ಕುರಿತು ಹೊನ್ನಾಳಿಯ ತರಗನಹಳ್ಳಿಯಲ್ಲಿ ಬಿಜೆಪಿಯಿಂದ ಜನಜಾಗೃತಿ ಪಾದಯಾತ್ರೆ. -
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಪಕ್ಷದ ವಿರೋಧವನ್ನೂ ಲೆಕ್ಕಿಸದೇ ವಿಪಕ್ಷದ ಬಾಯಿ ಮುಚ್ಚಿಸಲು ದ್ವೇಷ ಭಾಷಣ ಮಸೂದೆ ತಂದರು. ನಂತರ ಬೆಂಗಳೂರಿನಲ್ಲಿ ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ಪ್ರವೇಶವಿಲ್ಲ ಎಂದು ಮಾಧ್ಯಮದವರನ್ನು ಕೂಡ ಹತ್ತಿಕ್ಕುವ ಕೆಲಸ ಮಾಡಿದ್ದಾರೆ ಎಂದು ಟೀಕಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ ವಿರೋಧ ಇರುವುದು ಸಹಜ. ಆಡಳಿತ ನಡೆಸುವ ಸಚಿವರು, ಮುಖ್ಯಮಂತ್ರಿಗಳಿಗೆ ಸಹನೆ ಇರಬೇಕಾಗುತ್ತದೆ. ಸಮಾಜ ಯಾಕೆ ವಿರೋಧಿಸುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಇದನ್ನೆಲ್ಲ ಬಿಟ್ಟು ಕೇಸು ದಾಖಲಿಸಿ ಬೆದರಿಸುವುದು, ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ ಮಾಡಿಕೊಡಿ ಎಂದು ಕೇಳಿ ಪ್ರತಿಭಟಿಸಿದರೆ ಲಾಠಿಚಾರ್ಜ್ ಮಾಡುತ್ತೀರಿ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ನುಡಿದರು.
ಅಧಿಕಾರ ಇದೆ ಎಂದು ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ. ರಾಜ್ಯದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸಮಯ ಬಂದಾಗ ಬಡಿಗೆ ತೆಗೆದುಕೊಂಡು ಇವರಿಗೆ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದು ತಿಳಿಸಿದರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದೆಲ್ಲೆಡೆ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನ: ಪ್ರಲ್ಹಾದ್ ಜೋಶಿ
ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಸಂದರ್ಭದಲ್ಲಿ ಶಾಂತಿಯುತ ಮೆರವಣಿಗೆ ನಡೆಯುತ್ತಿತ್ತು. ಅಲ್ಲಿ ಒಂದು ಧರ್ಮದ ದೇಶದ್ರೋಹಿಗಳು ಕಲ್ಲೆಸೆದಿದ್ದಾರೆ. ಕೋಮುಗಲಭೆ ಸೃಷ್ಟಿಸುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಟಿಪ್ಪು ಸುಲ್ತಾನ್ ಮನಸ್ಥಿತಿ ಇರುವವರು ಈ ರೀತಿ ನಡೆದುಕೊಳ್ಳುತ್ತಿದ್ದಾರೆ. ಈ ಸರ್ಕಾರದ ಅಲ್ಪಸಂಖ್ಯಾತ ಓಲೈಕೆ ರಾಜಕಾರಣದಿಂದ ದೇಶದ್ರೋಹಿಗಳನ್ನು ಹೆಚ್ಚಿಸುತ್ತಿದೆ ಎಂದು ಆಕ್ಷೇಪಿಸಿದರು. ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ಹೊನ್ನಾಳಿಯಲ್ಲಿ ಅತ್ಯಂತ ಯಶಸ್ವಿ ಜಾಗೃತಿ ಕಾರ್ಯಕ್ರಮ
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ವಿಬಿ ಜಿ ರಾಮ್ ಜಿ ಕಾರ್ಯಕ್ರಮದ ಜಾಗೃತಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದ ಅವರು, ರಾಜ್ಯದೆಲ್ಲೆಡೆ ಜನಜಾಗೃತಿ ಕಾರ್ಯ ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದರು.
ಗ್ರಾಮೀಣ ಭಾಗದ ಬಡವರು, ಕಾರ್ಮಿಕರಿಗೆ ಅನುಕೂಲ ಆಗಲು ಪ್ರಧಾನಿ ನರೇಂದ್ರ ಮೋದಿಜೀ ಅವರು ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದು, ದಿನಗೂಲಿಯನ್ನು 370 ರೂ.ಗೆ ಏರಿಸಿದ್ದು, ವಾರ್ಷಿಕವಾಗಿ ಅವರಿಗೆ 45 ಸಾವಿರ ರೂ. ಹೆಚ್ಚು ಬರಲಿದೆ ಎಂದು ವಿವರಿಸಿದರು.
ವಿವಿಧ ಇಲಾಖೆಗಳಲ್ಲಿನ 2.5 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಭರವಸೆ
ಮನರೇಗಾದಡಿ ಭ್ರಷ್ಟಾಚಾರ ನಡೆಯುತ್ತಿತ್ತು. ಒಳ್ಳೆಯ ಕೆಲಸ ಆಗುತ್ತಿರಲಿಲ್ಲ. ದೇಶಾದ್ಯಂತ ವಿಬಿ ಜಿ ರಾಮ್ ಜಿ ಯೋಜನೆಯಡಿ 85 ಸಾವಿರ ಕೋಟಿ ಖರ್ಚು ಮಾಡಬೇಕಾದರೆ, ಗ್ರಾಮೀಣ ಭಾಗದಲ್ಲಿ ಬಡವರಿಗೆ ಅನುಕೂಲ ಆಗಬೇಕು; ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೇವಲ ಗುಂಡಿ ಅಗೆದು ಗುಂಡಿ ಮುಚ್ಚುವುದಕ್ಕಿಂತ ಹೆಚ್ಚಾಗಿ ಅಲ್ಲಿ ಒಂದು ಆಸ್ತಿ ನಿರ್ಮಾಣ ಆಗಿ, ದುಡ್ಡು ಸದುಪಯೋಗ ಆಗಬೇಕೆಂಬ ಆಶಯ ಮೋದಿಜೀ ಅವರದು ಎಂದರು.