ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸೂಟ್‌ಕೇಸ್ ವಿಚಾರ; ಬಿಜೆಪಿಯವರು ಇನ್ನು ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಡಿ.ಕೆ. ಶಿವಕುಮಾರ್

DK Shivakumar: ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ʼಸದಾನಂದ ಗೌಡರು ಪ್ರಚಾರಕ್ಕೆ ಬಂದಿದ್ದಾರಾ ಅವರು ಸೂಟ್‌ಕೇಸ್ ಎಷ್ಟು ದಪ್ಪ ಇದೆ, ಎಷ್ಟು ಅಗಲವಿದೆ ಎಂದು ಲೆಕ್ಕಾಚಾರ ಹಾಕಿದ್ದಾರಾ? ಅವರು ಈ ಬಗ್ಗೆ ದೂರು ನೀಡಲಿ ಎಂದು ತಿರುಗೇಟು ನೀಡಿದ್ದಾರೆ.

ಸೂಟ್‌ಕೇಸ್ ವಿಚಾರ; ಬಿಜೆಪಿಯವರು ಇನ್ನು ಯಾಕೆ ದೂರು ಕೊಟ್ಟಿಲ್ಲ ಎಂದ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Apr 2, 2026 9:28 PM

ದಾವಣಗೆರೆ, ಏ. 2: ಸೂಟ್‌ಕೇಸ್ ವಿಚಾರವಾಗಿ ಮಾತಾಡಿರುವ ಬಿಜೆಪಿ ಮುಖಂಡ ಸದಾನಂದ ಗೌಡ ಇನ್ನು ಯಾಕೆ ದೂರು ನೀಡಿಲ್ಲ ಎಂದು ಡಿಸಿಎ ಡಿ.ಕೆ. ಶಿವಕುಮಾರ್ (DK Shivakumar) ಪ್ರಶ್ನಿಸಿದರು. ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಗುರುವಾರ ಅವರು ಪ್ರತಿಕ್ರಿಯೆ ನೀಡಿದರು. ಸದಾನಂದ ಗೌಡರು ಸೂಟ್‌ಕೇಸ್ ಬಗ್ಗೆ ಮಾತಾಡಿದ್ದಾರೆ ಎಂದು ಗಮನ ಸೆಳೆದಾಗ, ʼಸದಾನಂದ ಗೌಡರು ಪ್ರಚಾರಕ್ಕೆ ಬಂದಿದ್ದಾರಾ ಅವರು ಸೂಟ್‌ಕೇಸ್ ಎಷ್ಟು ದಪ್ಪ ಇದೆ, ಎಷ್ಟು ಅಗಲವಿದೆ ಎಂದು ಲೆಕ್ಕಾಚಾರ ಹಾಕಿದ್ದಾರಾ? ಅವರು ಈ ಬಗ್ಗೆ ದೂರು ನೀಡಲಿ ಎಂದು ತಿರುಗೇಟು ನೀಡಿದರು.

ಅಲ್ಪಸಂಖ್ಯಾತರ ಮತಗಳನ್ನು ಬಿಜೆಪಿಗೆ ಹೆಚ್ಚು ಸೆಳೆಯಿರಿ, ಶೇಕಡಾ 45ರಷ್ಟು ಸೆಳೆಯಿರಿ ಎಂಬ ಸದಾನಂದಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ʼಬಹಳ ಸಂತೋಷ, ಅವರು ಎಲ್ಲರನ್ನೂ ಕರೆದುಕೊಳ್ಳಲಿ. ಇರುವ ಎಲ್ಲ 2.30 ಲಕ್ಷ ಮತಗಳನ್ನು ಅವರೇ ಹಾಕಿಸಿಕೊಳ್ಳಲಿ, ಬಹಳ ಸಂತೋಷʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕೇಂದ್ರದಿಂದ ಸೌದೆ ಒಲೆ ಯೋಜನೆ: ಡಿಸಿಎಂ ಡಿಕೆಶಿ

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇ ದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಜನರು ಪರದಾಡುತ್ತಿದ್ದು, ಹೋಟೆಲ್‌ಗಳು ಬಂದ್ ಆಗುತ್ತಿವೆ. ಜನ ವಿದ್ಯುತ್ ಒಲೆ ಬಳಸುವ ಅನಿವಾರ್ಯತೆ ಎದುರಾಗಿದೆ. ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ ಪ್ರಮಾಣ 10% ಏರಿಕೆಯಾಗಿದೆ. ಕೇಂದ್ರ ಸರ್ಕಾರ ಜನರಿಗೆ ಸೌದೆ ಭಾಗ್ಯ ನೀಡಿದ್ದು, ಎಲ್ಲಿಂದ ಸೌದೆ ಒದಗಿಸುವುದು? ಎಂದು ಲೇವಡಿ ಮಾಡಿದರು.

ಯುದ್ಧಗಳ ನೆಪ, ಕೇಂದ್ರ ಸರ್ಕಾರದ ತಪ್ಪು ನಿರ್ಧಾರ, ನೀತಿಗಳಿಂದಾಗಿ ಇಂದು ದೇಶದ ಜನ ಬೆಲೆ ಏರಿಕೆಯಿಂದ ನರಳುತ್ತಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾತ್ರವಲ್ಲ, ಟೋಲ್ ಶುಲ್ಕ, ರೈಲ್ವೇ ಟಿಕೆಟ್ ದರ ಎಲ್ಲವೂ ಹೆಚ್ಚಾಗಿದೆ. ಕೆಲವು ಅನಿವಾರ್ಯ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಬೆಲೆ ಏರಿಕೆ ತೀರ್ಮಾನ ಮಾಡಿದಾಗ ಯಾವ ರೀತಿ ಟೀಕೆ ಟಿಪ್ಪಣಿ ಬಂದಿವೆ ಎಂದು ಎಲ್ಲರಿಗೂ ಗೊತ್ತಿದೆ. ಸಾಮಾನ್ಯ ಜನರ ಮೇಲೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಯುದ್ಧ ಮಾಡುತ್ತಿದೆ ಎಂದು ಟೀಕಿಸಿದರು.‌

ಜನರನ್ನು ಕೇಂದ್ರ ಸರ್ಕಾರ ಫೂಲ್ ಮಾಡುತ್ತಿದೆ. ನಾವು ಪಾದಯಾತ್ರೆ ಮಾಡಿದಾಗ ಈ ಬೆಲೆ ಏರಿಕೆ ಸಮಸ್ಯೆಯಿಂದ ಜನರು ಕಂಗೆಟ್ಟಿದ್ದು, ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ನೀಡಿ ಅವರಿಗೆ ಶಕ್ತಿ ತುಂಬಿದ್ದೇವೆ. ಈಗ ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕವಾಗಿ ರಕ್ಷಣೆ ನೀಡಿವೆ ಎಂದು ಹೇಳಿದರು.

900 ಔಷಧಗಳ ದರ ಏರಿಕೆ ಮಾಡಲಾಗಿದೆ. 12% ಜಿಎಸ್‌ ವಿಧಿಸಲಾಗಿದೆ. ಎನ್‌ಪಿಪಿಎ ಬೆಲೆ ಏರಿಕೆ ಮಾಡಿ ಇವುಗಳಿಗೆ ಶೇ 10.7 ರಷ್ಟು ಇದ್ದ ತೆರಿಗೆಯನ್ನು ಶೇ.12ಕ್ಕೆ ಏರಿಕೆ ಮಾಡಲಾಗಿದೆ. ಅಗತ್ಯ ವಸ್ತುಗಳಾದ ಪ್ಲಾಸ್ಟಿಕ್ ಪೈಪ್ ಸೇರಿದಂತೆ ಇತರೇ ವಸ್ತುಗಳ ಬೆಲೆಯನ್ನು ಟನ್‌ಗೆ 7 ಸಾವಿರ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಲೋಕೋಪಯೋಗಿ ಇಲಾಖೆಯಿಂದ ಬಿಟುಮಿನ್ ಹಾಕಲು ಟೆಂಡರ್ ಕರೆಯಲಾಗಿದೆ. ಈಗಾಗಲೇ ಕೆಲಸ ಪ್ರಾರಂಭ ಮಾಡಲಾಗಿದೆ. ಬೆಲೆ ಹೆಚ್ಚಳದಿಂದ ಕೆಲಸ ನಿಲ್ಲಿಸುವುದು ಬೇಡ ಸರ್ಕಾರವೇ ನೇರವಾಗಿ ಬಿಟುಮಿನ್ ಅನ್ನು ಸರಬರಾಜು ಮಾಡಲಿದೆ ಎಂದು ಬೆಂಗಳೂರಿನ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಬೆಂಗಳೂರು ಹಿತಕ್ಕೆ ನಮ್ಮ ತೀರ್ಮಾನ ಟೀಕಿಸುತ್ತಿರುವವರು, ಮುಂದೆ ಸ್ಮರಿಸುತ್ತಾರೆ ಎಂದ ಡಿ.ಕೆ. ಶಿವಕುಮಾರ್

ಮೋದಿ ಸರ್ಕಾರ ಪ್ರತಿನಿತ್ಯ ಜನರ ಜೋಬಿನಿಂದ ಪಿಕ್ ಪಾಕೆಟ್ ಮಾಡುತ್ತಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕೇಂದ್ರ ಸರ್ಕಾರ 900 ಕೋಟಿ ರುಪಾಯಿ ವಸೂಲಿ ಮಾಡಿದೆ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರ ಅದೇ ಹಣ ನಮಗೆ ಕೊಟ್ಟರೆ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿ ಮಾಡಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.