ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

K S Bhagawan: ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್.ಭಗವಾನ್!

Davanagere News: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿದ್ದಾರೆ. ಶೂದ್ರನಾದ ಶಂಬೂಕ, ಪತ್ನಿ ಸೀತೆ, ಸಹೋದರ ಲಕ್ಷ್ಮಣನನ್ನೇ ರಾಮ ಸಾಯಿಸಿದ್ದಾನೆ. ಇಂಥವರು ನಮಗೆ ಅದರ್ಶ ಆಗಬೇಕಾ? ಎಂದು ಪ್ರಶ್ನಿಸಿದ್ದಾರೆ.

ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಕೆ.ಎಸ್.ಭಗವಾನ್

‌ವಿಚಾರವಾದಿ ಚಿಂತಕ ಕೆ.ಎಸ್‌.ಭಗವಾನ್. -

Prabhakara R
Prabhakara R Jun 9, 2026 7:34 PM

ದಾವಣಗೆರೆ: ಸದಾ ವಿವಾದಗಳಿಂದಲೇ ಸುದ್ದಿಯಾಗುವ ಲೇಖಕ, ಚಿಂತಕ ಪ್ರೊ.ಕೆ.ಎಸ್.ಭಗವಾನ್ ಇದೀಗ ಹಿಂದೂಗಳ ಆರಾಧ್ಯ ದೈವ ಶ್ರೀರಾಮನ (Lord Rama) ಬಗ್ಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಕಂಡುಬಂದಿದೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, "ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ" ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಟಿ ಯಾಗ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜತೆ ರಾತ್ರಿ ಮಲಗಬೇಕು. ಪುರೋಹಿತರ ಜತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು ರಾಮ ಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ ನಾನು ಬರೆದಿದ್ದು, ವಾಲ್ಮೀಕಿ ರಾಮಾಯಣದಲ್ಲಿ ಇದರ ಬಗ್ಗೆ ಉಲ್ಲೇಖಿಸಿರುವುದಾಗಿ ಹೇಳಿದ್ದಾರೆ.

ಶೂದ್ರನಾದ ಶಂಬೂಕ, ಪತ್ನಿ ಸೀತೆ, ಸಹೋದರ ಲಕ್ಷ್ಮಣನನ್ನೇ ರಾಮ ಸಾಯಿಸಿದ್ದಾನೆ. ಇಂಥವರು ನಮಗೆ ಅದರ್ಶ ಆಗಬೇಕಾ? ಪಂಚಾಂಗವನ್ನು ಕೇಳೋದು ಬಿಟ್ಟು ಬಿಡಿ, ಮೊದಲು ನಿಮ್ಮ ಮೇಲೆ ನೀವು ನಂಬಿಕೆ ಬೆಳಸಿಕೊಳ್ಳುವುದನ್ನು ಅಭ್ಯಾಸ ಮಾಡಿ ಎಂದಿದ್ದಾರೆ. ಶೂದ್ರರೆಲ್ಲರೂ ಬ್ರಾಹ್ಮಣರ ಗುಲಾಮರು ಎಂದು ಮನಸ್ಮೃತಿ ಹೇಳುತ್ತೆ. ಗಾಂಧೀಜಿ ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದರೆ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ಗುಲಾಮಗಿರಿಯಿಂದ ಜನತೆಗೆ ಮುಕ್ತಿ ಕೊಡಿಸಿದ್ದಾರೆ ಎಂದಿದ್ದಾರೆ.

ಇನ್ನು ಮದುವೆ ಸಂದರ್ಭದಲ್ಲಿ ಪುರೋಹಿತರು ಹೇಳುವ ಮಂತ್ರದ ಅರ್ಥ ನಿಮಗೆ ಗೊತ್ತಿಲ್ಲ. ಅದು ಗೊತ್ತಾಗಿಯೇ ನನ್ನ ಮದುವೆಗೆ ಯಾವುದೇ ಪುರೋಹಿತರನ್ನು ಕರೆಸದಂತೆ ತಂದೆಯವರಿಗೆ ಹೇಳಿದ್ದೆ. ಪಠ್ಯ ಪುಸ್ತಕಗಳು ಈಗ ಸತ್ಯ ಇಲ್ಲದೆ ತನ್ನ ಸತ್ವವನ್ನು ಕಳೆದುಕೊಂಡಿವೆ. ಸ್ವಾಮಿ ವಿವೇಕಾನಂದರು ತಾವು ಬೌದ್ಧ ಧರ್ಮಕ್ಕೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ.

Davanagere News: ದಾವಣಗೆರೆಯಲ್ಲಿ ನೀಚ ಕೃತ್ಯ; ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್!

ಬೌದ್ಧ ಧರ್ಮ ಅತ್ಯಂತ ಮಾನವೀಯವಾದ ಧರ್ಮ, ವೈಜ್ಞಾನಿಕ ಧರ್ಮವಾಗಿದೆ. ನನ್ನ ಮಾತಿನ ಬಗ್ಗೆ ಯಾರಾದರೂ ಕೇಸ್ ಹಾಕಬೇಕು ಎಂದುಕೊಂಡರೆ ಎಲ್ಲ ಮಾಹಿತಿ ತಿಳಿದುಕೊಂಡು ಕೇಸ್ ಹಾಕಿ ಎಂದು ಹೇಳಿದ್ದಾರೆ.