ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಪರಪ್ಪನ ಅಗ್ರಹಾರ ಜೈಲಿಗೆ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದೆ ಈ ಭೇಟಿಯ ಹಿಂದೆ?

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಸಂಜೆ 4.30 ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

ಪರಪ್ಪನ ಅಗ್ರಹಾರ ಜೈಲಿಗೆ ಡಿಕೆ ಶಿವಕುಮಾರ್ ದಿಢೀರ್‌ ಭೇಟಿ; ಏನಿದು ರಹಸ್ಯ?

ಡಿಕೆ ಶಿವಕುಮಾರ್ -

ಹರೀಶ್‌ ಕೇರ
ಹರೀಶ್‌ ಕೇರ Nov 21, 2025 6:57 PM

ಬೆಂಗಳೂರು, ನ. 21: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ದಿಡೀರ್ ಪರಪ್ಪನ ಅಗ್ರಹಾರ (bengaluru central jail) ಜೈಲಿಗೆ ಶುಕ್ರವಾರ ಭೇಟಿ ನೀಡಿ, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿದರು. ವಿಚಾರಣೆ ಎದುರಿಸುತ್ತಿರುವ ಈ ಶಾಸಕರಿಗೆ ಸಾಂತ್ವನ ತಿಳಿಸಲು ಡಿಕೆಶಿ ಇವರನ್ನು ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಹಲವರು ಈ ಭೇಟಿಯ ಹಿಂದೆ ರಾಜಕೀಯ ಬೆಳವಣಿಗೆಯ ಸಾಧ್ಯತೆಯನ್ನೂ ಊಹಿಸಿದ್ದಾರೆ.

ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರು ವಿಚಾರಣಾಧೀನ ಕೈದಿಗಳಾಗಿ ಜೈಲಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಸಂಜೆ 4.30 ಕ್ಕೆ ಜೈಲಿಗೆ ಭೇಟಿ ನೀಡಿದ ಶಿವಕುಮಾರ್ ಅವರು ಮೊದಲಿಗೆ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಸಮಾಧಾನ ಹೇಳಿದರು. ನಂತರ ಕೋರ್ಟ್ ವಿಚಾರಣೆ ಮುಗಿಸಿ ಬಂದ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾಗಿ ಸಂತೈಸಿದರು.

ಈಗಾಗಲೇ ಡಿಕೆಶಿ ಬಣದ ಕೆಲ ಶಾಸಕರು ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಬಣದ ಶಾಸಕರು ಬೆಂಗಳೂರಿನಲ್ಲಿ ಡಿನ್ನರ್‌ ಸಭೆ ನಡೆಸಿದ್ದಾರೆ. ಸಿಎಂ ಪಟ್ಟಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ತಿಳಿಸಿದ್ದರೂ, ಉಭಯ ಬಣಗಳು ತಮ್ಮದೇ ಆದ ರೀತಿಯಲ್ಲಿ ರಾಜಕೀಯದಲ್ಲಿ ತೊಡಗಿವೆ. ಒಂದು ವೇಳೆ ಅಧಿಕಾರ ಹಂಚಿಕೆ ವಿಚಾರ ಬಂದರೆ ಎರಡೂ ಬಣದಲ್ಲಿ ಎಷ್ಟು ಜನ ಶಾಸಕರಿದ್ದಾರೆ ಎಂಬ ವಿಚಾರ ಮುಖ್ಯವಾಗಲಿದೆ. ಈ ಹಿನ್ನೆಲೆಯಲ್ಲಿ, ಇಬ್ಬರು ಶಾಸಕರ ಜೊತೆ ಮಾತನಾಡಲು ಡಿಕೆಶಿ ತೆರಳಿರುವುದು ಬೇರೆ ಅರ್ಥ ಮೂಡಿಸಿದೆ.

ಇದನ್ನೂ ಓದಿ: DK Shivakumar: ಐದು ವರ್ಷ ನಾನೇ ಸಿಎಂ ಅಂದಿದ್ದಾರೆ, ಆಲ್ ದ ಬೆಸ್ಟ್; ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ: ಡಿಕೆ ಶಿವಕುಮಾರ್‌