ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Delhi Smog: ದೆಹಲಿಯಲ್ಲಿ ದಟ್ಟ ಮಂಜು, ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಬಾಕಿ

ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ (Delhi smog) ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು.

ದೆಹಲಿಯಲ್ಲಿ ದಟ್ಟ ಮಂಜು, ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಬಾಕಿ

ದಿಲ್ಲಿಯಲ್ಲಿ ವಿಮಾನದಲ್ಲಿ ಕರ್ನಾಟಕ ಶಾಸಕರು -

ಹರೀಶ್‌ ಕೇರ
ಹರೀಶ್‌ ಕೇರ Dec 15, 2025 10:23 AM

ನವದೆಹಲಿ, ಡಿ.15: ದಟ್ಟವಾದ ಹೊಗೆ- ಮಂಜು (Delhi smog) ಕವಿದ ಪರಿಣಾಮ ಕರ್ನಾಟಕದ (Karnataka) 21 ಶಾಸಕರು ಪ್ರಯಾಣಿಸಬೇಕಿದ್ದ ಇಂಡಿಗೋ (IndiGo flight) ವಿಮಾನ ನವದೆಹಲಿಯಲ್ಲಿ ಹಾರಾಟ ಆರಂಭಿಸದೆ ನಾಲ್ಕಾರು ಗಂಟೆಗಳಿಂದ ಬಾಕಿಯಾಗಿದೆ. ಶಾಸಕರು ವಿಮಾನದ ಒಳಗಡೆಯೇ ಸಿಲುಕಿದ್ದಾರೆ. ಇವರು ಬೆಳಗಾವಿಗೆ ಹೊರಡಬೇಕಿದ್ದ ವಿಮಾನದಲ್ಲಿ ಇದ್ದಾರೆ.

ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ (Delhi) ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು.

ಶಾಸಕರ ವಿಮಾನ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಹೊರಡಬೇಕಿತ್ತು. ವಿಮಾನದ ಒಳಗಡೆ ಕುಳಿತುಕೊಂಡ ಬಳಿಕ ದಟ್ಟವಾದ ಹೊಗೆಯಿಂದಾಗಿ ವಿಮಾನ ಟೇಕಾಫ್‌ ಆಗಿಲ್ಲ. ಸುಮಾರು 4 ಗಂಟೆಯಿಂದ ಶಾಸಕರು ವಿಮಾನದಲ್ಲೇ ಕುಳಿತಿದ್ದು ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕಾಫ್‌ ಅಗಿಲ್ಲ. ವಿಮಾನ ಎಷ್ಟು ಗಂಟೆಗೆ ಟೇಕಾಫ್‌ ಆಗಲಿದೆ ಎಂಬ ಮಾಹಿತಿಯನ್ನು ಸಿಬ್ಬಂದಿ ನೀಡಿಲ್ಲ. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನಗಳ ಟೇಕಾಫ್‌ ಮತ್ತು ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ.

Delhi Smog: ದೆಹಲಿಯನ್ನು ಆವರಿಸಿದ ದಟ್ಟ ಮಂಜು; ವಿಮಾನ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯ

ಲಕ್ಷ್ಮೀ ಹೆಬಾಳ್ಕರ್, ಕೆಜೆ ಜಾರ್ಜ್, ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‌ಕೆ ಪಾಟೀಲ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಮುಂತಾದವರು ಈ ವಿಮಾನದಲ್ಲಿದ್ದಾರೆ ಎಂದು ಗೊತ್ತಾಗಿದೆ.