SIT SP's Car Accident: ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಎಸ್‌ಪಿ ತೆರಳುತ್ತಿದ್ದ ಕಾರು ಪಲ್ಟಿ; ಹಲವರಿಗೆ ಗಾಯ
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಇನ್ನೋವಾ ಕಾರು ನಿಯಂತ್ರಣ ಕಳೆದುಕೊಂಡು, ಪಲ್ಟಿಯಾಗಿದೆ. ಕಾರಿನಲ್ಲಿ ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರು ಕಾರಿನಲ್ಲಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಎಸ್ಐಟಿ ಎಸ್ಪಿ ಸೈಮನ್ -
ಬೆಳ್ತಂಗಡಿ: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ಮಾಡುತ್ತಿರುವ ಎಸ್ಐಟಿ ಎಸ್‌ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ (SIT SP's Car Accident) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಘಟನೆ ನಡೆದಿದೆ. ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಎಸ್ಪಿ ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಓರ್ವ ಸಿಬ್ಬಂದಿ ಹಾಗೂ ಕಾರು ಚಾಲಕನಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಇನ್ನೋವಾ ಕಾರು ನಿಯಂತ್ರಣ ಕಳೆದುಕೊಂಡು, ಪಲ್ಟಿಯಾಗಿದೆ. ಕಾರಿನಲ್ಲಿ ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರು ಕಾರಿನಲ್ಲಿದ್ದರು. ಎಸ್‌ಐಟಿ ತನಿಖಾಧಿಕಾರಿಯಾಗಿರುವ ಚಿಕ್ಕಮಗಳೂರು ಎಸ್ಪಿ ಜೀತೇಂದ್ರ ದಯಾಮ ಅವರನ್ನು ಭೇಟಿಯಾಗಲು ಈ ತಂಡ ತೆರಳುತ್ತಿತ್ತು. ಆದರೆ ಚಾರ್ಮಾಡಿ ಬಳಿ ಇನ್ನೋವಾ ಕಾರು ಪಲ್ಟಿಯಾಗಿದೆ.
ಅಪಘಾತದ ಬಳಿಕ ಎಸ್‌ಪಿ ಸಿ.ಎ. ಸೈಮನ್ ಮತ್ತು ಅವರ ತಂಡ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಆಗಮಿಸಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಕುರಿತು ದೂರು ದಾಖಲಿಸುವ ಪ್ರಕ್ರಿಯೆ ನಡೆದಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ಸಾವು
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಭೀಕರ ಅಪಘಾತ (Vijayapur Accident) ಸಂಭವಿಸಿದೆ. ಟಿಪ್ಪರ್ ಹಾಗೂ ಸಾರಿಗೆ ಬಸ್ ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಹಿನ್ನೆಲೆ ಅಪಘಾತ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಅಪಘಾತದಲ್ಲಿ ಟಿಪ್ಪರ್ನಲ್ಲಿದ್ದ ಚಾಲಕ ಅಶೋಕ್ ಉಟಗಿ ಹಾಗೂ ಪತ್ನಿ ರಾಧಾಬಾಯಿ ಹಾಗೂ ಸಾರಿಗೆ ಬಸ್ ಚಾಲಕ ಹನುಮಂತ ಚಲವಾದಿ ಮೃತಪಟ್ಟಿದ್ದಾರೆ.
ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್; ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಟಿಪ್ಪರ್ ವಾಹನ ಚಡಚಣದತ್ತ ಹೊರಟಿತ್ತು. ಸರ್ಕಾರಿ ಬಸ್ ಚಡಚಣದಿಂದ ವಿಜಯಪುರದತ್ತ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.