Hubli stabbing case: ಆಟದ ವಿಚಾರಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆಗೈದ 13 ವರ್ಷದ ಬಾಲಕ!
Hubli stabbing case: ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಐದಾರು ಸ್ನೇಹಿತರು ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರ ನಡುವೆ ಜಗಳವಾಗಿದೆ. ಈ ವೇಳೆ ಒಬ್ಬ ಬಾಲಕ ಮನೆಗೆ ಹೋಗಿ ಚಾಕು ತಂದು, ಸ್ನೇಹಿತನನ್ನೇ ಕೊಲೆ ಮಾಡಿ ಮಾಡಿದ್ದಾನೆ.


ಹುಬ್ಬಳ್ಳಿ: ಆಟದ ವಿಚಾರಕ್ಕೆ13 ವರ್ಷದ ಬಾಲಕನೊಬ್ಬ ತನ್ನ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವುದು ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ. ಕಮರಿಪೇಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ (Hubli stabbing case) ನಡೆದಿದ್ದು, 15 ವರ್ಷದ ಚೇತನ್ ರಕ್ಕಸಗಿ ಕೊಲೆಯಾದ ಬಾಲಕ. ಸೋಮವಾರ ಸಂಜೆ ಚೇತನ್ ಮತ್ತು ಕೊಲೆ ಮಾಡಿದ ಆರೋಪಿ ಬಾಲಕ ಇಬ್ಬರು ಜಗಳ ಮಾಡಿಕೊಂಡಿದ್ದರು. ಅಪ್ರಾಪ್ತ ವಯಸ್ಸಿನ ಬಾಲಕ ಮನೆಯಿಂದ ಚಾಕು ತಂದು ಚೇತನ್ ಹೊಟ್ಟೆಯ ಎಡಬಾಗಕ್ಕೆ ಇರಿದಿದ್ದಾನೆ. ಇದರಿಂದ ಚೇತನ್ ಸ್ಥಳದಲ್ಲೇ ಕುಸಿದು ಬಿದ್ದಿದ್ದು. ಅಲ್ಲಿದ್ದ ಮಕ್ಕಳು ಕಿರುಚುವುದನ್ನು ಕಂಡ ಆರೋಪಿ ತಾಯಿ ಸ್ಥಳಕ್ಕೆ ಬಂದು ಚೇತನ್ನನ್ನು ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಸ್ಪತ್ರೆಗೆ ಸೇರಿಸುವ ವೇಳೆಗೆ ಚೇತನ್ ಮೃತಪಟ್ಟಿದ್ದಾನೆ.
ಇನ್ನು ಕೊಲೆಯಾದ ಚೇತನ್ ಈಗಷ್ಟೇ ಒಂಬತ್ತನೇ ತರಗತಿ ಪಾಸ್ ಆಗಿದ್ದನಂತೆ. ಕೊಲೆ ಮಾಡಿದ ಬಾಲಕ ಆರನೇ ತರಗತಿ ಪಾಸ್ ಆಗಿದ್ದನಂತೆ. ರಜೆ ಹಿನ್ನೆಲೆಯಲ್ಲಿ ಎದುರು ಬದುರು ಮನೆ ಆಗಿದ್ದರಿಂದ ಎಲ್ಲಾ ಬಾಲಕರು ಪ್ರತಿ ದಿನ ಆಟ ಆಡುತ್ತಿದ್ದರು. ನೆನ್ನೆ ಕೂಡ ಚೇತನ್ ಮತ್ತು ಕೊಲೆ ಮಾಡಿದ ಬಾಲಕ ಸೇರಿದಂತೆ ಐದಾರು ಸ್ನೇಹಿತರು ಸೇರಿಕೊಂಡು ಆಟವಾಡುತ್ತಿದ್ದರು. ಈ ವೇಳೆ ಚೇತನ್ ಮತ್ತು ಕೊಲೆ ಮಾಡಿರೋ ಬಾಲಕ ಆಟದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಅಷ್ಟಕ್ಕೆ ಬಾಲಕ ಮನೆಗೆ ಹೋಗಿ ಚಾಕುತಂದು ಕೊಲೆ ಮಾಡಿ ಬಿಟ್ಟಿದ್ದಾನೆ.
ಘಟನೆ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನನ್ನ ಸರ್ವೀಸ್ನಲ್ಲೇ ಇಂತಹ ಘಟನೆಯನ್ನು ಮೊದಲ ಬಾರಿಗೆ ನೋಡುತ್ತಿದ್ದೇನೆ. ಪೋಷಕರು ಮಕ್ಕಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ. ಚಾಕು ಇರಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ | Gims Hospital: ಜಿಮ್ಸ್ ಆಸ್ಪತ್ರೆಯಲ್ಲಿ ಕೈಕೊಟ್ಟ ಲಿಫ್ಟ್; ಗೋಡೆ ಒಡೆದು 9 ಮಂದಿ ರಕ್ಷಣೆ
ಬೀದರ್‌ನಲ್ಲಿ ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು
ಬೀದರ್: ಹೊಸ ಮನೆ ನಿರ್ಮಾಣ ಮಾಡುತ್ತಿರುವಾಗ ಮನೆಗೆ ನೀರು ಹಾಕಲು ಪಂಪ್ ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶಿಸಿ 8ನೇ ತರಗತಿಯ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Electric Shock) ಹುಲಸೂರು ತಾಲೂಕಿನ ತೋಗಲೂರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪಲ್ಲವಿ ರಾಜೇಂದ್ರ ದೇವಗೊಂಡ (15) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಹೊಸ ಮನೆಗೆ ನೀರು ಹಾಕಲು ನೀರಿನ ಮೋಟರ್ ಆನ್ ಮಾಡಲು ಹೋದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಘಟನೆ ನಡೆದಿದೆ ತಿಳಿದು ಬಂದಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.